ಚಿಕ್ಕಮಗಳೂರು: ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ನಡೆದ ಗಲಭೆ ಕುರಿತು ತನಿಖೆ ನಡೆಸಲು ಸಿಎಂ ಹಾಗೂ ಗೃಹ ಸಚಿವರು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾನೂ ಕೂಡ ಹೆಚ್ಚಿನ ತನಿಖೆಗೆ ಆದೇಶಿಸಿದ್ದೇನೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಈ ಕುರಿತು ಚಿಕ್ಕಮಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಲ್ಲು ತೂರಾಟ ಮಾಡಿದ ಮುಸ್ಲಿಂಮರ ಮೇಲೆ ಎಫ್‌ಐಆರ್ ದಾಖಲಾಗಿದೆ. ಈವರೆಗೂ ಯಾವುದೇ ಹಿಂದೂಗಳ ಮೇಲೆ ಎಫ್‌ಐಆರ್ ದಾಖಲಾಗಿಲ್ಲ. ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಅವರು ತನಿಖೆಗೆ ಸೂಚನೆ ನೀಡಿದ್ದಾರೆ. ನಾನು ಕೂಡ ಹೆಚ್ಚಿನ ತನಿಖೆ ನಡೆಸಲು ಆದೇಶ ಮಾಡಿದ್ದೇನೆ ಎಂದರು.
ಇನ್ನು ಈ ಪ್ರಕರಣದಲ್ಲಿ ಹಿಂದೂ ಮುಸ್ಲಿಂಮರು ಅಂತೆಲ್ಲಾ ನಾವು ನೋಡುವುದಿಲ್ಲ. ಯಾರೇ ತಪ್ಪು ಮಾಡಿದರೂ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.





