ರಾಜ್ಯ

ಶಿಥಿಲಾವಸ್ಥೆಯಲ್ಲಿರುವ ಆಸ್ಪತ್ರೆ ಕಟ್ಟಡಗಳು, ಕಾಂಪೌಂಡ್‌ಗಳ ಪರಿಶೀಲನೆಗೆ ಆದೇಶ: ಡಾ. ಶರಣ‌ ಪ್ರಕಾಶ್ ಪಾಟೀಲ್

ಬೆಂಗಳೂರು: ನಮ್ಮ ವೈದ್ಯಕೀಯ ಶಿಕ್ಷಣ ಇಲಾಖೆಯಡಿಯಲ್ಲಿ ಬರುವ ಎಲ್ಲಾ ಆಸ್ಪತ್ರೆಯ ಕಟ್ಟಡಗಳನ್ನು ಹಾಗೂ ಕಾಂಪೌಂಡ್‌ಗಳನ್ನು ಪರಿಶೀಲನೆ ನಡೆಸಿ ಅಧ್ಯಯನ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಆರ್.ಪಾಟೀಲ್ ತಿಳಿಸಿದ್ದಾರೆ.

ಮಳೆಯಿಂದ ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು ಏಳು ಮಂದಿ ಮೃತಪಟ್ಟ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳು, ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಸಚಿವರು ಈ ಮಾಹಿತಿ ನೀಡಿದರು.

ಬೌರಿಂಗ್‌ ಆಸ್ಪತ್ರೆಯ ದುರಂತದ ಕುರಿತು ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರರ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ. ಈ ವರದಿ ಬಂದ ನಂತರ ಮುಂದಿನ ಕ್ರಮದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಡಾ.ಪಾಟೀಲ್‌ ತಿಳಿಸಿದರು.

ಬೌರಿಂಗ್‌ ಆಸ್ಪತ್ರೆ, ವಿಕ್ಟೋರಿಯಾ ಆಸ್ಪತ್ರೆ ಸೇರಿದಂತೆ ರಾಜ್ಯದಲ್ಲಿರುವ ಎಲ್ಲ ಆಸ್ಪತ್ರೆ ಕಟ್ಟಡಗಳನ್ನು ಹಾಗೂ ಕಾಂಪೌಂಡ್‌ಗಳನ್ನು ತಜ್ಞರ ತಂಡ ಪರಿಶೀಲನೆ ನಡೆಸಲು ಆದೇಶಿಸಲಾಗಿದೆ ಎಂದು ವಿವರಿಸಿದರು.

ಬೌರಿಂಗ್‌ ಆಸ್ಪತ್ರೆಯ ಗೋಡೆ ಕುಸಿದು ಮೃತಪಟ್ಟವರಿಗೆ ಮುಖ್ಯಮಂತ್ರಿಗಳು ಈಗಾಗಲೇ ರೂ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆಯೂ ವೈದ್ಯರಿಗೆ ತಿಳಿಸಲಾಗಿದೆ. ಮುಂದೆ ಈ ರೀತಿಯ ದುರಂತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ನಾವು ಬದ್ಧರಾಗಿದ್ದೇವೆ ಎಂದು ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ಸ್ಪಷ್ಟಪಡಿಸಿದರು.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

12 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

13 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

14 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

15 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

18 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

19 hours ago