Mysore
21
clear sky

Social Media

ಶುಕ್ರವಾರ, 30 ಜನವರಿ 2026
Light
Dark

ಹೈಕೋರ್ಟ್‌ನಿಂದ ಸಿ.ಟಿ.ರವಿ ಬಿಡುಗಡೆಗೆ ಆದೇಶ: ಪ್ರಜಾಪ್ರಭುತ್ವದ ಗೆದ್ದಿದೆ ಎಂದ ವಿ.ವೈ.ವಿಜಯೇಂದ್ರ

ಬೆಂಗಳೂರು: ಬಿಜೆಪಿ ವಿಧಾನ ಪರಿಷತ್‌ ಶಾಸಕ ಸಿ.ಟಿ.ರವಿ ಅವರನ್ನು ಬಿಡುಗಡೆ ಮಾಡುವಂತೆ ಹೈಕೋರ್ಟ್‌ ಆದೇಶ ಹೊರಡಿಸಿದ್ದು, ಕಾಂಗ್ರೆಸ್‌ ಸರ್ಕಾರಕ್ಕೆ ಹಾಗೂ ಪೊಲೀಸ್‌ ದಬ್ಬಾಳಿಕೆಗೆ ಮಂಗಳಾರತಿ ಎತ್ತಿದೆ. ಹೀಗಾಗಿ ರಾಜ್ಯದಲ್ಲಿ ಪ್ರಜಾಪ್ರಭುತ್ವ ಗೆದ್ದಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಜನಪ್ರತಿನಿಧಿಗಳು ಎಂಬುದನ್ನೂ ಲೆಕ್ಕಿಸದೇ ನೀತಿ-ನಿಯಮಗಳನ್ನು ಮೀರಿ ಪೊಲೀಸ್ ಬಲ ಬಳಸಿಕೊಂಡು, ಸರ್ವಾಧಿಕಾರಿ ಆಡಳಿತ ನೆನಪಿಸುವ ರೀತಿಯಲ್ಲಿ ಕಾಂಗ್ರೆಸ್ ಸರ್ಕಾರ ನಡೆದುಕೊಳ್ಳುತ್ತಿದೆ. ನಿನ್ನೆಯಿಂದ(ಡಿ.19) ಇಂದಿನವರೆಗೂ ಸಿ. ಟಿ. ರವಿ ಅವರನ್ನು ನಿಯಮ ಮೀರಿ ಬಂಧಿಸುವ ಮೂಲಕ ತುರ್ತು ಪರಿಸ್ಥಿತಿಯ ಕರಾಳತೆಯನ್ನು ಕಾಂಗ್ರೆಸ್ ಸರ್ಕಾರ ಇಂದಿನ ಪೀಳಿಗೆಗೆ ನೆನಪು ಮಾಡಿಕೊಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಗೂಂಡಾಗಳನ್ನು ಪೋಷಿಸಿಕೊಂಡು ಸರ್ಕಾರ ನಡೆಸುವುದು, ಪೊಲೀಸರನ್ನು ಬಳಸಿಕೊಂಡು ಯಾರನ್ನು ಬೇಕಾದರೂ ಬಂಧಿಸುತ್ತೇವೆಂದು ದ್ವೇಷ ಸಾರಲು ಹೊರಟಿದ್ದ ಈ ಸರ್ಕಾರಕ್ಕೆ ಪಾಠ ಹೇಳುವ ರೀತಿಯಲ್ಲಿ ಉಚ್ಚ ನ್ಯಾಯಾಲಯ ಸಕಾಲದಲ್ಲಿ ಮಧ್ಯ ಪ್ರವೇಶಿಸಿ ಸಂವಿಧಾನ ಹಾಗೂ ಈ ನೆಲದ ಕಾನೂನಿನ ಘನತೆಯನ್ನು ತಿಳಿಸಿಕೊಟ್ಟಿದೆ. ಹೀಗಾಗಿ ನ್ಯಾಯಾಲಯದ ಈ ತೀರ್ಪನ್ನು ಕರ್ನಾಟಕದ ಜನತೆಯ ಪರವಾಗಿ ಸ್ವಾಗತಿಸಿ, ಶಾಸಕ ಸಿ.ಟಿ ರವಿಯವರನ್ನು ತಕ್ಷಣವೇ ಬಿಡುಗಡೆಗೊಳಿಸುವಂತೆ ಆದೇಶ ಹೊರಡಿಸಿರುವುದಕ್ಕೆ ಅಭಿನಂದಿಸುತ್ತೇನೆ ಎಂದು ಹೇಳಿದ್ದಾರೆ.

ಪ್ರಜಾಪ್ರಭುತ್ವವನ್ನು ದಮನಮಾಡಿ ದಬ್ಬಾಳಿಕೆ, ಕ್ರೌರ್ಯ ತುಂಬಿಕೊಂಡ ವರ್ತನೆಗಳು ಹಾಗೂ ಭ್ರಷ್ಟಾಚಾರದ ಹಗರಣಗಳನ್ನು ಮೈಗೆ ಮೆತ್ತಿಕೊಂಡಿರುವ ಈ ಕಾಂಗ್ರೆಸ್ ಸರ್ಕಾರದ ವಿರುದ್ಧ ತಾರ್ಕಿಕ ಅಂತ್ಯ ಕಾಣಿಸುವವರೆಗೂ ಬಿಜೆಪಿ ಸರ್ಕಾರ ತನ್ನ ಹೋರಾಟ ಮುಂದುವರೆಯಲಿದೆ ಎಂದಿದ್ದಾರೆ.

ಪ್ರಜಾಪ್ರಭುತ್ವ ದೇಗುಲದಲ್ಲಿ ನಡೆದ ಪರಮ ದೌರ್ಜನ್ಯದ ಈ ಘಟನೆಯನ್ನು, ದೇಶದ ಗಮನ
ಸೆಳೆಯುವಂತೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿ ಪರಿಣಾಮಕಾರಿ ಪಾತ್ರ ವಹಿಸಿದ ಮಾಧ್ಯಮಗಳನ್ನು ಈ ಸಂದರ್ಭದಲ್ಲಿ ಮನಃ ಪೂರ್ವಕವಾಗಿ ಅಭಿನಂದಿಸುವೆ ಎಂದು ತಿಳಿಸಿದ್ದಾರೆ.

Tags:
error: Content is protected !!