ಬೆಂಗಳೂರು : ಮಳೆ ಸುರಿದು ಜಲಾಶಯಗಳಲ್ಲಿ ನೀರು ಹರಿದು ಬರುಂತಾಗಲಿ. ದೇವರನ್ನು ಪ್ರಾರ್ಥಿಸುವ ಹೊರತಾಗಿ ತಮ್ಮಲ್ಲಿ ಬೇರೆ ದಾರಿ ಉಳಿದಿಲ್ಲ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನಿನ್ನೆ ತಮಿಳುನಾಡಿಗೆ ನ.1 ರಿಂದ ನ.15 ರವರೆಗೆ ಪ್ರತಿದಿನ 2,600 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ರಾಜ್ಯಕ್ಕೆ ಆದೇಶಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿಲ್ಲ.ಕೆಆರ್ಎಸ್ ಅಣೆಕಟ್ಟೆಗೆ ಒಳಹರಿವು ಬಹುತೇಕ ಶೂನ್ಯವಾಗಿದೆ. ಆದರೆ, ಕಬಿನಿ ಮತ್ತು ಕೆಆರ್ ಎಸ್ ಜಲಾಶಯಗಳಿಂದ 815 ಕ್ಯೂಸೆಕ್ ನೀರು ತಮಿಳುನಾಡಿಗೆ ನೈಸರ್ಗಿಕವಾಗಿ ಹರಿದು ಹೋಗುತ್ತಿದೆ. ಸದ್ಯ ನಮ್ಮಲ್ಲಿ ಕೇವಲ 51 ಟಿಎಂಸಿ ಅಡಿ ನೀರು ಇದ್ದು, ಕುಡಿಯುವ ನೀರನ್ನು ಉಳಿಸಿಕೊಂಡರೆ ಸಾಕಾಗಿದೆ ಎಂದರು.
ಇನ್ನು ಮುಂದುವರೆದು ಮಾತನಾಡಿದ ಅವರು, ನಮ್ಮ ಹತ್ತಿರ ತಮಿಳುನಾಡಿಗೆ ಹರಿಸಲು ನೀರಿಲ್ಲ. ನೀರು ಬಿಡುವ ಶಕ್ತಿಯೂ ನಮ್ಮಲ್ಲಿ ಇಲ್ಲ. ಕುಡಿಯುವ ನೀರನ್ನು ಉಳಿಸಿಕೊಂಡರೆ ಸಾಕಾಗಿದೆ. ಇದನ್ನು ಸಂಬಂಧಪಟ್ಟವರಿಗೆ ಮನವರಿಕೆ ಮಾಡಿಕೊಡಬೇಕಿದೆ ಎಂದು ಹೇಳಿದ್ದಾರೆ.
ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ.…
ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಹಾಗೂ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು…
ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ ಎಂದು…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ…
ಮಂಡ್ಯ: ಸಕ್ಕರೆ ನಾಡು ಮಂಡ್ಯ ನಗರಿಯಲ್ಲಿ ಮೂರು ದಿನಗಳ ಕಾಲ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು,…