ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರ-ಅಂಕೋಲಾದ ಕಾಂಗ್ರೆಸ್ ಶಾಸಕ ಸತೀಸ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ನಗರದ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ.
ಪ್ರಕರಣದ ವಾದ-ಪ್ರತಿವಾದ ಆಲಿಸಿದ್ದ ಜನಪತ್ರಿನಿಧಿಗಳ ನ್ಯಾಯಾಲಯದ ನ್ಯಾಯಧೀಶ ಸಂತೋಷ್ ಗಜಾನನ ಭಟ್, ಅ.24ರಂದು ಶಾಸಕ ಸತೀಶ್ ಸೈಲ್ ದೋಷಿ ಎಂದು ತೀರ್ಪು ನೀಡಿ, ಇಂದಿಗೆ ಶಿಕ್ಷೆ ಪ್ರಕಟಿಸುವ ತೀರ್ಪು ಕಾಯ್ದಿರಿಸಿತ್ತು.
ಶಾಸಕ ಸ್ಥಾನದಿಂದ ಅನರ್ಹ?
ಎರಡು ವರ್ಷಗಳಿಗಿಂತ ಹೆಚ್ಚಿನ ಜೈಲು ಶಿಕ್ಷೆಯಾದರೆ ಶಾಸಕ, ಸಂಸದ ಸ್ಥಾನ ರದ್ದಾಗುವ ನಿಯಮವಿದೆ. ಇದೀಗ ಈ ಪ್ರಕರಣದಲ್ಲಿ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆಯಾಗಿರುವುದರಿಂದ ಶಾಸಕ ಸ್ಥಾನದಿಂದ ಅನರ್ಹಗೊಳ್ಳುವ ಸಾಧ್ಯತೆ ಇದೆ.