ರಾಜ್ಯ

ಜ.23ರಿಂದ ಸಾವಯವ ಮತ್ತು ಸಿರಿಧಾನ್ಯಗಳ ಅಂತರಾಷ್ಟ್ರೀಯ ವಾಣಿಜ್ಯ ಮೇಳ

ಬೆಂಗಳೂರು:  ಇಲ್ಲಿನ ಪ್ಯಾಲೆಸ್ ಗ್ರೌಂಡ್‌ನ ತ್ರಿಪುರವಾಸಿನಿ ಆವರಣದಲ್ಲಿ ಜನವರಿ 23 ರಿಂದ 25 ರವರೆಗೆ ಸಾವಯವ ಮತ್ತು ಸಿರಿಧಾನ್ಯಗಳ ಅಂತರಾಷ್ಟ್ರೀಯ ವಾಣಿಜ್ಯ ಮೇಳವನ್ನು ಆಯೋಜಿಸಲಾಗುತ್ತಿದೆ. ಸದರಿ ಕಾರ್ಯಕ್ರಮಕ್ಕೆ ಹೊರ ರಾಜ್ಯಗಳಲ್ಲಿ ನಡೆಯುವ ಮೇಳಗಳ ವಾಣಿಜ್ಯ ಆಸಕ್ತರನ್ನು ಆಹ್ವಾನಿಸಲಾಗಿದೆ ಎಂದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕೃಷಿ ಮೇಳ ಮಾದರಿ ಸಿರಿಧಾನ್ಯ ಮೇಳ ಆಯೋಜಿಸಿ, ಅಂತರಾಷ್ಟ್ರೀಯ ವಾಣಿಜ್ಯ ಬೆಳೆಗಳ ಬಗ್ಗೆ ಅರಿವು ಮೂಡಿಸಿದ್ದು, ಹಲವು ಕೃಷಿ ವಿಜ್ಞಾನಿಗಳು ಭಾಗವಹಿಸಲಿದ್ದಾರೆ ಎಂದರು.

ಕಳೆದ ವರ್ಷ ರಾಜ್ಯದಲ್ಲಿ ನಡೆದ ಅಂತರಾಷ್ಟ್ರೀಯ ಸಿರಿಧಾನ್ಯ ಮೇಳಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಮೆಚ್ಚುಗೆ ವ್ಯಕ್ತಪಡಿಸಿದೆ. ದೇಶದ ಅನೇಕ ರಾಜ್ಯಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಸಿರಿಧಾನ್ಯಗಳ ಉತ್ಪನ್ನ ಸೃಷ್ಠಿಸುವ ನಿಟ್ಟಿನಲ್ಲಿ ಅರಿವು ಮೂಡಿಸಲಾಗುವುದು, ಅಂತರಾಷ್ಟ್ರೀಯ ವಾಣಿಜ್ಯ ಮೇಳದಲ್ಲಿ ಇದಕ್ಕೆ ಮಳಿಗಗಳನ್ನು ಆಯೋಜಿಸಲಾಗಿದೆ. ರೈತರಿಗೂ ಕಾರ್ಯಾಗಾರ ಆಯೋಜಿಸಿ, ವಿಚಾರ ಸಂಕಿರ್ಣಗಳನ್ನು ನಡೆಸಿ ವಿಚಾರಗಳನ್ನು ತಿಳಿಸಿಕೊಡಲಾಗುವುದು ಎಂದರು.

ವಿದೇಶಿ ಸರ್ಕಾರಗಳ ಕೃಷಿ ಮುಖ್ಯಸ್ಥರ ಭಾಗಿ

ಮೇಳದಲ್ಲಿ ಸ್ವಿಡ್ಜರ್‌ಲ್ಯಾಂಡ್, ಸ್ಪೇನ್, ಆಸ್ಟ್ರೇಲಿಯಾ, ಕೀನ್ಯಾ, ರೋಮ್ ಸೇರಿದಂತೆ ಅನೇಕ ವಿದೇಶಿ ಸರ್ಕಾರಗಳ ಕೃಷಿ ಮುಖ್ಯಸ್ಥರು ಭಾಗವಹಿಸಲಿದ್ದು, ದೇಶದ 2೦ಕ್ಕೂ ಹೆಚ್ಚು ಮಂತ್ರಿಗಳು, ರೈತ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು.

ಸಿರಿಧಾನ್ಯ ಮೇಳದ ವಿಚಾರವಾಗಿ ತೈವಾನ್ ರಾಷ್ಟ್ರಕ್ಕೂ ಭೇಟಿ ನೀಡಿ ಮಾಹಿತಿ ನೀಡಲಾಗಿದೆ. ಮಂಡ್ಯದಲ್ಲಿ ನಡೆದ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇಳೆ ಜಾಗೃತಿ ಮೆರವಣಿಗೆ ಹಾಗೂ ಮೇಳದಲ್ಲಿ ಮಳಿಗೆಗಳನ್ನು ನೀಡಿ ಸಿರಿಧ್ಯಾನಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.

ಮೇಳದ ಹಿನ್ನಲೆ ಹಲವು ಪೂರ್ವಭಾವಿ ಕಾರ್ಯಕ್ರಮ
ಸಿರಿಧಾನ್ಯ ಮತ್ತು ಸಾವಯವ ಮೇಳದ ಅಂಗವಾಗಿ ಹಲವು ಪೂರ್ವಭಾವಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಜ.೦7, ೦8 ರಂದು ಬೆಂಗಳೂರಿನ ಸ್ಲಿರ್ಫ್‌ಕ್ಯುಲಿನರಿ ಅಕಾಡೆಮಿಯಲ್ಲಿ ರಾಜ್ಯ ಮಟ್ಟದ ಪಾಕಸ್ಪರ್ಧೆ, ಜ.1೦ಕ್ಕೆ ಕ್ರಿಸ್ತು ಜಯಂತಿ ಕಾಲೇಜಿನಲ್ಲಿ ಸಿರಿಧಾನ್ಯಗಳ ಸುಸ್ಥಿರ ಭವಿಷ್ಯಕ್ಕಾಗಿ ಮಹತ್ವದ ಧಾನ್ಯಗಳ ವಿಚಾರವಾಗಿ ಪ್ಯಾನಲ್ ಚರ್ಚೆ ಜ.17 ರಂದು ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಸಿರಿಧಾನ್ಯಗಳ ಪಾಕಶಾಸ್ತ್ರ ವಿಚಾರ ಸಂಕಿರಣ, ಜ.19 ರಂದು ಕಬ್ಬನ್ ಪಾರ್ಕ್‌ನಲ್ಲಿ ಸಿರಿಧಾನ್ಯ ಓಟ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ಹಂಚಿಕೊಂಡರು.

ವಾಣಿಜ್ಯ ಮೇಳದಲ್ಲಿ ರಾಜ್ಯದ ಆಯಾ ಪ್ರದೇಶಕ್ಕೆ ಸೂಕ್ತವಾದ ದೇಸಿ ತಳಿಗಳ ಸಂರಕ್ಷಣೆ, ವಿತರಣೆಯ ಮಾಹಿತಿ, ಮಣ್ಣಿನ ಫಲವತ್ತತೆ, ಮಣ್ಣಿನ ಪರೀಕ್ಷೆ, ಯಾವ ರೀತಿಯ ಮಣ್ಣಿಗೆ ಯಾವ ಬೆಳೆ ಬೆಳೆಯಬಹುದಾಗಿದೆ ಎಂಬುದು, ಮಣ್ಣಿನ ಆರೋಗ್ಯದ ಬಗ್ಗೆ ರೈತರಿಗೆ ಮೇಳದಲ್ಲಿ ತಿಳಿಯಲಿದೆ ಎಂದು ಹೇಳಿದರು.

2೦ ಕೋಟಿ ವೆಚ್ಚದಲ್ಲಿ ಮಾಹಿತಿ ಕೇಂದ್ರ
ಸಿರಿಧಾನ್ಯಗಳಿಂದ ಆಹಾರೋತ್ಪನ್ನಗಳು ರುಚಿಕರವಾಗಿ ಇರುವುದು ಎಲ್ಲರಿಗೂ ಇಷ್ಟವಾಗುವಂತಹ ರೀತಿಯಲ್ಲಿ ಸವಿಯನ್ನು ನೀಡಲಿದೆ. ಸಿರಿಧಾನ್ಯ ಆಹಾರ ಉತ್ಪನ್ನಗಳ ಸಂರಕ್ಷಣೆ ಹಾಗೂ ಚಿರಪರಿಚಿತವನ್ನಾಗಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ. ಸಿರಿಧಾನ್ಯ ವಿಚಾರಗಳನ್ನು ತಿಳಿಯಲು ರೈತರಿಗೆ ಬೆಂಗಳೂರಿನ ಹೆಬ್ಬಾಳದಲ್ಲಿ ಕೇಂದ್ರವೊಂದನ್ನು 2೦ ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ ಎಂದು ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೆಪಿಎಸ್‌ಸಿ ಮುಚ್ಚುವ ಬಗ್ಗೆ ಚಿಂತನೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…

7 hours ago

ನಂಜನಗೂಡು: ಬೋನಿಗೆ ಬಿದ್ದ ಚಿರತೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…

8 hours ago

ವಂದೇ ಮಾತರಂ ಅರ್ಧಕ್ಕೆ ಕಡಿತ: ಆದೇಶ ಮರುಪರಿಶೀಲನೆಗೆ ರಾಜ್ಯಪಾಲರ ಸೂಚನೆ

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…

8 hours ago

ಮದ್ದೂರಿನಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕನ ಮನೆ ಮೇಲೆ ಲೋಕಾಯುಕ್ತ ದಾಳಿ

ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…

9 hours ago

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

12 hours ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

17 hours ago