ರಾಜ್ಯ

ಶೋಷಿತ ಸಮುದಾಯಗಳ ಸಂಘಟನೆ ನಿರಂತರ ಪ್ರಕ್ರಿಯೆ : ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು : ಪರಿಶಿಷ್ಟ ಪಂಗಡದಲ್ಲಿರುವ ವಾಲ್ಮೀಕಿ ನಾಯಕ ಸಮುದಾಯವೂ ಸೇರಿದಂತೆ ಎಲ್ಲ ತಳಸಮುದಾಯಗಳು ಸಂಘಟಿತರಾದರೆ ಮಾತ್ರ ಸಾಮಾಜಿಕ, ರಾಜಕೀಯ, ಆರ್ಥಿಕ ವಿಕಸನ ಸಾಧ್ಯ. ಸಂಘಟನೆ ಕಾರ್ಯ ಎಂಬುದು ನಿರಂತರ ಪ್ರಕ್ರಿಯೆ ಎಂದು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಗಾಂಧಿನಗರದ ಸ್ಯಾಂಕ್ಟಮ್ ಹೋಟೇಲಿನ ಸಭಾಂಗಣದಲ್ಲಿ (ಮಂಗಳವಾರ, ಅಗಸ್ಟ್ 20) ಆಯೋಜಿಸಿದ್ದ ಪರಿಶಿಷ್ಟ ಪಂಗಡಗಳ ನೌಕರರು ಹಾಗೂ ಜನಪ್ರತಿನಿಧಿಗಳ ಸಮಾಲೋಚನೆ ಸಭೆ ಉದ್ದೇಶಿಸಿ ಅವರು ಮಾತನಾಡಿದರು.

ಶೋಷಿತ ಸಮಾಜದಲ್ಲಿ ಶಿಕ್ಷಣ ಪಡೆದು ನೌಕರಿ ಮಾಡುತ್ತಿರುವ ಜನರ ಮೇಲೆ ಹೆಚ್ಚು ಜವಾಬ್ದಾರಿಗಳಿವೆ. ಪರಿಶಿಷ್ಟ ಪಂಗಡದ ನೌಕರರು ತಮ್ಮ ವೃತ್ತಿ ಸಂಬಂಧಿತ ಮುಂಬಡ್ತಿ, ವರ್ಗಾವಣೆ, ಸ್ಥಳ ನಿಯುಕ್ತಿ ಸೇರಿದಂತೆ ಅನೇಕ ವಿಷಯಗಳಲ್ಲಿ ಎದುರಿಸುತ್ತಿರುವ ಸಮಸ್ಯೆ, ಸವಾಲುಗಳನ್ನು ಸಂಘಟಿತರಾದಾಗ ಪರಿಹಾರ ಕಂಡುಕೊಳ್ಳಲು ಮಾರ್ಗಗಳು ದೊರೆಯುತ್ತವೆ. ಕಾನೂನು ತಜ್ಞ ಎಲ್.ಜಿ.ಹಾವನೂರ ಹಾಗೂ ಅವರಿಗಿಂತ ಹಿಂದಿನಿಂದಲೂ ಸಮಾಜದ ಸಂಘಟನೆಗೆ ಅನೇಕರು ಶ್ತಮಿಸಿದ್ದಾರೆ. ಇದೊಂದು ನಿರಂತರ ಪ್ರಕ್ರಿಯೆ, ಪ್ರತಿಯೊಬ್ಬ ಪ್ರಜ್ಞಾವಂತರು ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಡಾ.ಪ್ರಸನ್ನಾನಂದ ಮಹಾಸ್ವಾಮಿಗಳು ಮಾತನಾಡಿ, ಆದಿಕವಿ ಮಹರ್ಷಿ ವಾಲ್ಮೀಕಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ವಿಚಾರಗಳನ್ನು ನಾವೆಲ್ಲ ಅಳವಡಿಸಿಕೊಂಡು ಅನುಷ್ಠಾನಗೊಳಿಸಬೇಕು ಎಂದರು.

ಶಾಸಕರಾದ ಅನ್ನಪೂರ್ಣ ತುಕಾರಾಮ, ಕರೆಮ್ಮನಾಯಕ, ಅನೀಲ್ ಚಿಕ್ಕಮಾದು, ಟಿ.ರಘುಮೂರ್ತಿ, ಜೆ.ಎನ್.ಗಣೇಶ್, ಡಾ.ಎನ್.ಟಿ.ಶ್ರೀನಿವಾಸ, ಚನ್ನಗಿರಿಯ ಮುಖಂಡ ಹೊದಿಗೆರೆ ರಮೇಶ ಮತ್ತಿತರರು ಮಾತನಾಡಿದರು. ಕರ್ನಾಟಕ ರಾಜ್ಯ ಎಸ್ ಟಿ ನೌಕರರ ಸಂಘದ ಅಧ್ಯಕ್ಷ ಜಗದೀಶ್ವರಮೂರ್ತಿ ವೈ.ಪಿ.,ಲೋಕೇಶ ನಾಯಕ ,ಪಂಪಾಪತಿ ಮತ್ತಿತರರು ನೌಕರರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಿದರು. ಈ ಕುರಿತು ಸಚಿವರಿಗೆ ಮನವಿ ಅರ್ಪಿಸಿದರು.

ಆಂದೋಲನ ಡೆಸ್ಕ್

Recent Posts

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

9 mins ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

18 mins ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

26 mins ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

1 hour ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

2 hours ago

ಮೈಸೂರಿನ ಕುವೆಂಪು ಮನೆ ಇನ್ಮುಂದೆ ಸ್ಮಾರಕ : ಸರ್ಕಾರದ ಘೋಷಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಾಷ್ಟ್ರಕವಿ ಕುವೆಂಪು ಅವರು ವಾಸವಿದ್ದ ನಿವಾಸವನ್ನು ಸ್ಮಾರಕ ಮತ್ತು ಮ್ಯೂಸಿಯಂ ಮಾಡಲು ಸರ್ಕಾರ…

3 hours ago