ಚಾಮರಾಜನಗರ : ರಾಜ್ಯದ ಕಾಂಗ್ರೆಸ್ ಸರ್ಕಾರ್ ಯೋಜನೆಗಳು ದೇಶದಲ್ಲಿ ಮಾತ್ರವಲ್ಲ, ಇಡೀ ಪ್ರಪಂಚದಲ್ಲೇ ಮಾದರಿ ಆಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಚಾಮರಾಜನಗರದ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಪಂಚದಲ್ಲೇ ಯಾವುದೇ ಸರಕಾರಗಳು ನೀಡದ 5 ಗ್ಯಾರಂಟಿ ಯೋಜನೆಗಳನ್ನು ನಾವು ನೀಡಿದ್ದೇವೆ. ಎಲ್ಲವೂ ಕೂಡ ಸಾಮಾನ್ಯ ಜನರಿಗೆ, ನೈಜ ಫಲಾನುಭವಿಗಳಿಗೆ ತಲುಪುವ ಯೋಜನೆಗಳು, ನಾವು ಅಂಬಾನಿ – ಅದಾನಿಗೆ ಕೊಡುತ್ತಿಲ್ಲ, ತಿಮ್ಮಣ್ಣ-ಬೊಮ್ಮಣ್ಣಗೆ ಕೊಡುತ್ತಿದ್ದೇವೆ ಎಂದು ಹೇಳಿದರು.
ನಮ್ಮದು ಪರ್ಸೇಂಟೇಜ್ ಇಲ್ಲದ ಯೋಜನೆಗಳು, ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆಯಾಗಲಿದೆ, ಒಂದು ಕುಟುಂಬಕ್ಕೆ ಏನಿಲ್ಲವೆಂದರೂ ತಿಂಗಳಿಗೆ 4-5 ಸಾವಿರ ಹಣ ಜಮೆಯಾಗುತ್ತಿದೆ, ನೊಬೆಲ್ ಪ್ರಶಸ್ತಿ ಪುರಸ್ಕೃತರು ನಮ್ಮ ಸರ್ಕಾರದ ಯೋಜನೆಗಳನ್ನು ಅಧ್ಯಯನ ಮಾಡಲು ಬರುತ್ತಿದ್ದಾರೆ ಎಂದರು.
ಇಂಡಿಯಾ ಒಕ್ಕೂಟಕ್ಕೆ ಒಲವು: ಕರ್ನಾಟಕದಲ್ಲಿ ಕಾಂಗ್ರೆಸ್ನ ಅಭೂತಪೂರ್ವ ಯಶಸ್ಸು ಇಡೀ ದೇಶದಲ್ಲಿ ಸಂಚಲನ ಮೂಡಿಸಿದೆ. ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಬರುವ ಎಲ್ಲ ಸಾಧ್ಯತೆ ಎದ್ದು ಕಾಣುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟದ ಪರ ಜನರ ನಿಲುವು ವ್ಯಕ್ತವಾಗುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…