ರಾಜ್ಯ

ನಮ್ಮ ಅಭಿವೃದ್ಧಿ ಕಾರ್ಯ ಸಹಿಸಲಾಗದೆ ಮೋದಿ ಕಿಡಿಗೇಡಿ ಮಾತುಗಳನ್ನಾಡುತ್ತಿದ್ದಾರೆ : ಕೃಷ್ಣಬೈರೇಗೌಡ

ಬಾಗಲಕೋಟೆ : ಬಿಜೆಪಿಯವರು ಆಪರೇಷನ್ ಮಾಡ್ತಾರೋ? ಇನ್ನೊಂದು ಮಾಡ್ತಾರೋ? ಮಾಡಲಿ. ಆದರೆ ಬಿಜೆಪಿ ಆಪರೇಷನ್ ಎದುರಿಸುವ ಶಕ್ತಿ ನಮ್ಮ ಕಾಂಗ್ರೆಸ್ ಪಕ್ಷಕ್ಕಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.

ಸಿದ್ದರಾಮಯ್ಯ ಎಷ್ಟು ದಿನ ಸಿಎಂ ಆಗಿ ಇರುತ್ತಾರೆ ಗೊತ್ತಿಲ್ಲ. ಸಿಎಂ, ಡಿಸಿಎಂ ಸೇರಿ ರಾಜ್ಯ ಲೂಟಿ ಮಾಡ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿಯವರ ಯಾವ ಪ್ರಯತ್ನವೂ ಈಡೇರುವುದಿಲ್ಲ. ನಮ್ಮಲ್ಲಿ ಸಹಮತವಿದೆ, ನಾವೆಲ್ಲರೂ ಒಂದಾಗಿದ್ದೇವೆ. ಇವತ್ತು ಮುಖ್ಯವಾಗಿ ಆಗಬೇಕಾಗಿರೋದು ಜನಗಳ ಕಾರ್ಯ. ನಾವು ಜನಗಳ ಕೆಲಸದ ಬಗ್ಗೆ ಗಮನ ಹರಿಸಿದ್ದೇವೆ. ಬಿಜೆಪಿ ಆಪರೇಷನ್ ಎದುರಿಸುವ ಶಕ್ತಿ ನಮ್ಮ ಪಕ್ಷಕ್ಕಿದೆ. ರಾಜ್ಯದ ಜನರ ಆಶೀರ್ವಾದ ನಮಗಿದೆ. ಜನರ ಕೆಲಸ ಕಾರ್ಯ ನಾವು ಮಾಡಬೇಕು. ಪ್ರಧಾನಿ ಮೋದಿಯವರು ಏನಾದ್ರೂ ಹೇಳಲಿ, ನಾವು ನಮ್ಮ ಜನರ ಕೆಲಸ ನಾವು ಮಾಡ್ತೇವೆ ಎಂದಿದ್ದಾರೆ.

ಬಿಜೆಪಿಯವರು ಅಂಬಾನಿ, ಅದಾನಿ ಅಂತವರಿಗೆ ಅನುಕೂಲ ಮಾಡಿದ್ದಾರೆ. ನಾವು ನಮ್ಮ ರಾಜ್ಯದ ಸಾಮಾನ್ಯ ಜನ ಅಂಬಣ್ಣ, ತಿಮ್ಮಣ್ಣನಿಗೆ ಗ್ಯಾರಂಟಿ ಕೊಟ್ಟು ಸಹಾಯ ಮಾಡಿದ್ದೀವಿ. ನಮ್ಮ ಅಭಿವೃದ್ಧಿ ಕಾರ್ಯ ಸಹಿಸಲಿಕ್ಕೆ ಆಗದೆ ಮೋದಿ ಕಿಡಿಗೇಡಿ ಮಾತುಗಳನ್ನು ಆಡ್ತಿದ್ದಾರೆ. ನಾವು ಧೃತಿಗೆಡುವುದಿಲ್ಲ. ನಮ್ಮ ಲಕ್ಷ್ಯ ಬೇರೆ ಕಡೆ ಹೋಗುವುದಿಲ್ಲ. ದುಡಿಯುವ ವರ್ಗದ ಜನರ ಪರವಾಗಿ ಕೆಲಸ ಮಾಡೋದು ನಮ್ಮ ಕೆಲಸ. ನಮ್ಮ ಸರ್ಕಾರದ ಬಡಜನರ ಪರ ಕಾರ್ಯ ಸಹಿಸದೆ ಸರ್ಕಾರ ಕಿತ್ತು ಹಾಕುವ ಪ್ರಯತ್ನವನ್ನು ಬಿಜೆಪಿ ಮಾಡ್ತಿದೆ. ಬಡವರ ಆಶೀರ್ವಾದ ನಮ್ಮನ್ನ ಕೈ ಹಿಡಿಯುತ್ತೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದ್ದಾರೆ.

ರಾಜ್ಯ-ಕೇಂದ್ರ ಸರ್ಕಾರಗಳ ಸಂಘರ್ಷದಲ್ಲಿ ಜನತೆಗೆ ಅನ್ಯಾಯ ಆಗುತ್ತಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಯಾವ ಸಂಘರ್ಷ ಮಾಡುವಂತಹ ಉದ್ದೇಶ ನಮಗಿಲ್ಲ. ಜನರಿಗೆ ಬರಬೇಕಾದ ಹಣವನ್ನು ಸಂವಿಧಾನ ಬದ್ಧವಾಗಿ ಕೇಳಿದ್ದೇವೆ. ಸೆಪ್ಟೆಂಬರ್ 23ರಿಂದ ಇಲ್ಲಿಯವರೆಗೆ 8 ಪತ್ರಗಳನ್ನು ಬರೆದಿದ್ದೇವೆ. ಕರ್ನಾಟಕ ಜನಗಳ ಹಕ್ಕನ್ನು ನಾವು ಒತ್ತಾಯ ಮಾಡ್ತಿದ್ದೇವೆ ಎಂದು ಹೇಳಿದ್ದಾರೆ.

ಕೇಂದ್ರಕ್ಕೆ ರಾಜ್ಯ ಸರ್ಕಾರ ಬರ ಅಧ್ಯಯನ ವರದಿ ಸಲ್ಲಿಸಿಲ್ಲ ಎಂಬ ಕಟೀಲ್ ಹೇಳಿಕೆ ಕುರಿತು ಮಾತನಾಡಿದ ಅವರು, ಬಾಯಿಗೆ ಬಂದ ಹಾಗೆ ಮಾತಾಡ್ತಾರೆ ಎಂದು ಅದಕ್ಕೆಲ್ಲಾ ಉತ್ತರ ಕೊಡೋಕೆ ಆಗುತ್ತಾ? ನಾವು ಮೆಮೊರಾಂಡಮ್ ಸಲ್ಲಿಸಿದ್ದೇವೆ. ಬಿಜೆಪಿಗರಿಗೆ ಸಾಸಿವೆ ಕಾಳಿನಷ್ಟು ಕಾಳಜಿ ಇದ್ದರೆ, ಕೇಂದ್ರ ಸರ್ಕಾರದಿಂದ ಕರ್ನಾಟಕ ರೈತರಿಗೆ ಬರಬೇಕಾದ ಹಣವನ್ನು‌ ಮೊದಲು ಬಿಡುಗಡೆ ಮಾಡಿಸಲಿ ಎಂದು ತಿರುಗೇಟು ನೀಡಿದ್ದಾರೆ.

ನಾವು ಒಟ್ಟು 223 ತಾಲೂಕುಗಳಲ್ಲಿ ಬರ ಘೋಷಣೆ ಮಾಡಿದ್ದೀವಿ. ದೇಶದಲ್ಲಿ ಹತ್ತು ಹನ್ನೆರಡು ರಾಜ್ಯಗಳಲ್ಲಿ ಬರ ಇದ್ದರೂ ಕೂಡ ಕರ್ನಾಟಕದಲ್ಲಿ ಮಾತ್ರ ಬರ ಘೋಷಣೆ ಮಾಡಿ, ಬೆಳೆ ನಷ್ಟದ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದೇವೆ. ಅಂದಾಜು 17.5 ಸಾವಿರ ಕೋಟಿ ಪರಿಹಾರ ಕೇಳಿದ್ದೇವೆ‌. ಕೇಂದ್ರದ ಗೃಹ, ಕೃಷಿ ಸಚಿವರುಗಳು ಭೇಟಿಗೆ ಅವಕಾಶ ಕೊಟ್ಟಿಲ್ಲ. ರಾಜ್ಯದಿಂದ 26 ಸಂಸದರಿದ್ದಾರೆ, ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ದೆಹಲಿಯಲ್ಲಿ ಕರ್ನಾಟಕದ ಸಚಿವರಿದ್ದಾರೆ. ರಾಜ್ಯದ ರೈತರಿಗೆ ಬರಬೇಕಾದ ಹಣವನ್ನು ಬಿಡುಗಡೆ ಮಾಡುವ ಪ್ರಯತ್ನ ಮಾಡಲಿ. ಪಕ್ಷಾತೀತವಾಗಿ ನಾವು ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದಿದ್ದಾರೆ.

 

lokesh

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

1 hour ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

2 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

2 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

2 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

4 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

4 hours ago