ರಾಜ್ಯ

ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ : ತಂದೆ ನೆನೆದು ಸಚಿವ ಖಂಡ್ರೆ ಭಾವುಕ

ಬೀದರ್:‌ ನಮ್ಮ ತಂದೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಸತತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯ ಸ್ವಲ್ಪಮಟ್ಟಿಗೆ ಆರೋಗ್ಯ ಸ್ಥಿರವಾಗಿದೆ. ಬಿಪಿ ಮತ್ತು ಪಲ್ಸ್‌ ರೇಟ್‌ ಕಡಿಮೆಯಾಗಿ, ಸ್ಥಿತಿ ಗಂಭೀರವಾಗಿದೆ. ಆದರೆ ಮನೆಯಲ್ಲೇ ಕೊನೆಯುಸಿರೆಳೆಯಬೇಕು ಎಂಬುದು ತಂದೆಯ ಆಸೆ. ಹೀಗಾಗಿ ನಾವು ಅವರನ್ನು ಆಸ್ಪತ್ರೆಯಿಂದ ಮನೆಗೆ ಶಿಫ್ಟ್‌ ಮಾಡಿದ್ದೇವೆ. ಆಕ್ಸಿಜನ್‌ ಮೇಲೆ ವೈದ್ಯರು ಸತತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿಸಿದರು.

ನಾನು ನಮ್ಮ ತಂದೆಯ ಆರೋಗ್ಯದ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡಿದ್ದೇನೆ. ನಮ್ಮ ತಂದೆ ಭೀಮಣ್ಣ ಖಂಡ್ರೆ ಶಿಕ್ಷಣ, ಧಾರ್ಮಿಕ, ಸಹಕಾರ, ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ ಎಂದು ತಂದೆಯ ಸಾಧನೆ ಬಗ್ಗೆ ನೆನೆದು ಭಾವುಕರಾಗಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

11 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

11 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

11 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

12 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

12 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

15 hours ago