ಬೆಳಗಾವಿ: ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ ನೀಡಿದ್ದು, ನಮ್ಮ ತಂದೆ ರಾಜಕೀಯ ಕೊನೆಗಾಲದಲ್ಲಿದ್ದಾರೆ ಎಂದು ಹೇಳಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಅವರು, ನಮ್ಮ ತಂದೆ ರಾಜಕೀಯ ಕೊನೆಗಾಲದಲ್ಲಿ ಇದ್ದಾರೆ. ವೈಚಾರಿಕವಾಗಿ ಪ್ರಗತಿಪರ ಸಿದ್ಧಾಂತ ಇರುವ ನಾಯಕರು ಬೇಕು. ಮಾರ್ಗದರ್ಶನ ಮಾಡಿ ನೇತೃತ್ವ ವಹಿಸಬೇಕು ಎಂದು ಹೇಳಿದರು.
ಸಿಎಂ ಬದಲಾವಣೆ ಚರ್ಚೆ ಸಂದರ್ಭದಲ್ಲೇ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿ ಮಾಡಿದೆ.





