ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು ಕಾರ್ಮಿಕ ಸಮಸ್ಯೆಗಳು ರೈತನ ಬದುಕನ್ನು ಸಂಕಷ್ಟಕ್ಕೆ ತಳ್ಳಿವೆ. ಈ ಸವಾಲುಗಳಿಗೆ ಉತ್ತರ ಕೊಡುವ ಶಕ್ತಿ ಇಂದಿನ ತಂತ್ರಜ್ಞಾನ ಮತ್ತು ಕೃಷಿ ಸ್ಟಾರ್ಟ್‌ಅಪ್‌ಗಳಲ್ಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರು ಅಭಿಪ್ರಾಯ ವ್ಯಕ್ತಪಡಿಸಿದರು..
ಇಂದು ಬೆಂಗಳೂರಿನ ಜಿಕೆವಿಕೆಯಲ್ಲಿ ನಡೆದ ಅಗ್ರಿ ಸ್ಟಾರ್ಟ್ ಅಪ್ ಕ್ಲಾನ್ ಕೇವ್ 2.0 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೃಷಿ ಸಚಿವರು, ನಮ್ಮ ಸರ್ಕಾರ ಕೃಷಿಯನ್ನು ಕೇವಲ ಬದುಕಿನ ಮಾರ್ಗವಾಗಿ ನೋಡುವುದಿಲ್ಲ. ಅದನ್ನು ಲಾಭದಾಯಕ ಉದ್ಯಮವನ್ನಾಗಿ ರೂಪಿಸುವ ಗುರಿಯೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಡಿಜಿಟಲ್ ಕೃಷಿ, ಡ್ರೋನ್ ತಂತ್ರಜ್ಞಾನ, ಡೇಟಾ ಆಧಾರಿತ ಬೆಳೆ ನಿರ್ವಹಣೆ, ಮೌಲ್ಯವರ್ಧನೆ ಮತ್ತು ನೇರ ಮಾರುಕಟ್ಟೆ ವ್ಯವಸ್ಥೆಗಳಿಗೆ ನಮ್ಮ ಸರ್ಕಾರ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ ಎಂದು ಹೇಳಿದರು..
ಇಂದು ದೇಶದಲ್ಲಿ ಸಾವಿರಾರು Agri Startups ಹುಟ್ಟಿಕೊಂಡಿವೆ. ಅದರಲ್ಲೂ ಬೆಂಗಳೂರು ಸ್ಟಾರ್ಟ್ ಅಪ್ ಗಳ ಹಬ್ ಆಗಿ ಮುಂಚೂಣಿಯಲ್ಲಿದೆ. ಯುವಕರು “ಉದ್ಯೋಗ ಹುಡುಕುವವರು” ಆಗದೆ, “ಉದ್ಯೋಗ ಸೃಷ್ಟಿಸುವವರು” ಆಗಬೇಕು ಎಂಬುದು ನಮ್ಮ ಆಶಯ ಎಂದು ಸಚಿವರು ತಿಳಿಸಿದರು..
ರೈತ ಉತ್ಪಾದಕರ ಸಂಘಗಳು (FPOs), ಕೃಷಿ ವಿಶ್ವವಿದ್ಯಾಲಯಗಳು, ಸಂಶೋಧನಾ ಸಂಸ್ಥೆಗಳು ಮತ್ತು ಯುವ ಉದ್ಯಮಿಗಳು ಒಟ್ಟಾಗಿ ಕೆಲಸ ಮಾಡಿದಾಗ ಮಾತ್ರ ಗ್ರಾಮೀಣ ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆ ಸಾಧ್ಯ.
ರಾಜ್ಯದ ಕೃಷಿ ಇಲಾಖೆ ರೈತರ ಆದಾಯ ಹೆಚ್ಚಿಸುವುದು, ನವೀನ ತಂತ್ರಜ್ಞಾನವನ್ನು ಗ್ರಾಮ ಮಟ್ಟಕ್ಕೆ ತಲುಪಿಸುವುದು ಮತ್ತು ಯುವಕರಿಗೆ ಕೃಷಿ ಆಧಾರಿತ ಉದ್ಯಮಗಳಲ್ಲಿ ಅವಕಾಶ ಸೃಷ್ಟಿಸುವುದಕ್ಕೆ ಬದ್ಧವಾಗಿದೆ ಎಂದು ಹೇಳಿದರು..
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…
ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…