ರಾಜ್ಯ

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು ಕಾರ್ಮಿಕ ಸಮಸ್ಯೆಗಳು ರೈತನ ಬದುಕನ್ನು ಸಂಕಷ್ಟಕ್ಕೆ ತಳ್ಳಿವೆ. ಈ ಸವಾಲುಗಳಿಗೆ ಉತ್ತರ ಕೊಡುವ ಶಕ್ತಿ ಇಂದಿನ ತಂತ್ರಜ್ಞಾನ ಮತ್ತು ಕೃಷಿ ಸ್ಟಾರ್ಟ್‌ಅಪ್‌ಗಳಲ್ಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರು ಅಭಿಪ್ರಾಯ ವ್ಯಕ್ತಪಡಿಸಿದರು..

ಇಂದು ಬೆಂಗಳೂರಿನ ಜಿಕೆವಿಕೆಯಲ್ಲಿ ನಡೆದ ಅಗ್ರಿ ಸ್ಟಾರ್ಟ್ ಅಪ್ ಕ್ಲಾನ್ ಕೇವ್ 2.0 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೃಷಿ ಸಚಿವರು, ನಮ್ಮ ಸರ್ಕಾರ ಕೃಷಿಯನ್ನು ಕೇವಲ ಬದುಕಿನ ಮಾರ್ಗವಾಗಿ ನೋಡುವುದಿಲ್ಲ. ಅದನ್ನು ಲಾಭದಾಯಕ ಉದ್ಯಮವನ್ನಾಗಿ ರೂಪಿಸುವ ಗುರಿಯೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಡಿಜಿಟಲ್ ಕೃಷಿ, ಡ್ರೋನ್ ತಂತ್ರಜ್ಞಾನ, ಡೇಟಾ ಆಧಾರಿತ ಬೆಳೆ ನಿರ್ವಹಣೆ, ಮೌಲ್ಯವರ್ಧನೆ ಮತ್ತು ನೇರ ಮಾರುಕಟ್ಟೆ ವ್ಯವಸ್ಥೆಗಳಿಗೆ ನಮ್ಮ ಸರ್ಕಾರ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ ಎಂದು ಹೇಳಿದರು..

ಇಂದು ದೇಶದಲ್ಲಿ ಸಾವಿರಾರು Agri Startups ಹುಟ್ಟಿಕೊಂಡಿವೆ. ಅದರಲ್ಲೂ ಬೆಂಗಳೂರು ಸ್ಟಾರ್ಟ್ ಅಪ್ ಗಳ ಹಬ್ ಆಗಿ ಮುಂಚೂಣಿಯಲ್ಲಿದೆ. ಯುವಕರು “ಉದ್ಯೋಗ ಹುಡುಕುವವರು” ಆಗದೆ, “ಉದ್ಯೋಗ ಸೃಷ್ಟಿಸುವವರು” ಆಗಬೇಕು ಎಂಬುದು ನಮ್ಮ ಆಶಯ ಎಂದು ಸಚಿವರು ತಿಳಿಸಿದರು..

ರೈತ ಉತ್ಪಾದಕರ ಸಂಘಗಳು (FPOs), ಕೃಷಿ ವಿಶ್ವವಿದ್ಯಾಲಯಗಳು, ಸಂಶೋಧನಾ ಸಂಸ್ಥೆಗಳು ಮತ್ತು ಯುವ ಉದ್ಯಮಿಗಳು ಒಟ್ಟಾಗಿ ಕೆಲಸ ಮಾಡಿದಾಗ ಮಾತ್ರ ಗ್ರಾಮೀಣ ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆ ಸಾಧ್ಯ.

ರಾಜ್ಯದ ಕೃಷಿ ಇಲಾಖೆ ರೈತರ ಆದಾಯ ಹೆಚ್ಚಿಸುವುದು, ನವೀನ ತಂತ್ರಜ್ಞಾನವನ್ನು ಗ್ರಾಮ ಮಟ್ಟಕ್ಕೆ ತಲುಪಿಸುವುದು ಮತ್ತು ಯುವಕರಿಗೆ ಕೃಷಿ ಆಧಾರಿತ ಉದ್ಯಮಗಳಲ್ಲಿ ಅವಕಾಶ ಸೃಷ್ಟಿಸುವುದಕ್ಕೆ ಬದ್ಧವಾಗಿದೆ ಎಂದು ಹೇಳಿದರು..

 

ಆಂದೋಲನ ಡೆಸ್ಕ್

Recent Posts

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

46 seconds ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

12 mins ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

2 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

3 hours ago

ಕಾಂತಾರ ದೈವಕ್ಕೆ ಅಪಮಾನ: ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ರಣವೀರ್‌ ಸಿಂಗ್‌

ಮೈಸೂರು: ಕಾಂತಾರ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ…

3 hours ago

ವಿಧಾನಪರಿಷತ್‌ನ ಏಳು ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ಹಾಗೂ ಬಿಹಾರ ವಿಧಾನಪರಿಷತ್‌ನ ದ್ವೈವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಕರ್ನಾಟಕದ ಏಳು ಸ್ಥಾನಗಳಿಗೆ ದ್ವೈವಾರ್ಷಿಕ…

4 hours ago