ಕೊಪ್ಪಳ: ಕಾರ್ಖಾನೆ ಸ್ಥಾಪನೆಗಿಂತ ನಮಗೆ ರೈತರ ಹಾಗೂ ಜನರ ಆರೋಗ್ಯ ರಕ್ಷಣೆ ಮುಖ್ಯ. ಜನಧ್ವನಿಗೆ ನಮ್ಮ ಸರ್ಕಾರ ಬೆಲೆ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ಇಂದು (ಫೆ.23) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಕೇಂದ್ರದ ಸಮೀಪದಲ್ಲಿಯೇ ಬಲ್ಟೋಟಾ ಸ್ಟೀಲ್ ಮತ್ತು ಪವರ್ ಲಿಮಿಟೆಡ್ (ಬಿಎಸ್‌ಪಿಎಲ್) ಕಂಪನಿ ಉಕ್ಕಿನ ಕಾರ್ಖಾನೆ ಸ್ಥಾಪನೆ ಮಾಡಲು ಜನರ ವಿರೋಧವಿದ್ದು, ಕಾರ್ಖಾನೆ ಸ್ಥಾಪನೆಗಿಂತ ಜನರ ಆರೋಗ್ಯ ರಕ್ಷಣೆಯೇ ಮುಖ್ಯ ಎಂದು ಹೇಳಿದರು.
ಕೆಲವರು ಕಾರ್ಖಾನೆ ಬೇಕು ಎಂದು ಹೇಳಿರುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಕಾರ್ಖಾನೆ ವಿಚಾರದಲ್ಲಿ ನಮ್ಮ ಸರ್ಕಾರದ ದ್ವಂದ್ವ ನಿಲುವಿನ ಪ್ರಶ್ನೆಯೇ ಇಲ್ಲ ಪಕ್ಷಾತೀತವಾಗಿ ನಡೆಯುತ್ತಿರುವ ಹೋರಾಟದ ಬಗ್ಗೆ ಮುಖ್ಯಮಂತ್ರಿ ಗಮನಕ್ಕೆ ತರುವೆ ಎಂದು ತಿಳಿಸಿದರು.
ಕಾರ್ಖಾನೆ ಸ್ಥಾಪನೆಗಿಂತ ರೈತರ ಹಿತವೇ ಮುಖ್ಯ. ಈ ಬಗ್ಗೆ ಕೊಪ್ಪಳ ಶಾಸಕ ರಾಘವೇಂದ್ರ, ಪಕ್ಷದ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ, ಹಿರಿಯರಾದ ಬಸವರಾಜ ರಾಯರೆಡ್ಡಿ ಎಲ್ಲರೂ ಸೇರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಮಾತನಾಡುತ್ತೇವೆ ಎಂದರು.
ಹಾಗೆಯೇ, ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಕಾರ್ಖಾನೆಗಳಿಂದ ದೂಳು ಬರುತ್ತಿದ್ದರೆ ನೋಟಿಸ್ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…