ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷೇತ್ರ ಹುಡುಕಾಟ ನಡೆಸುತ್ತಿರುವ ಬಗ್ಗೆ, ಅವರು ಕೋಲಾರಕ್ಕೆ ಹೋಗಿರುವ ಬಗ್ಗೆ ನಾನು ಲಘುವಾಗಿ ಮಾತನಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಎರಡು ಸಲ ನನ್ನಿಂದ ಸಿದ್ದರಾಮಯ್ಯಗೆ ರಾಜಕೀಯ ಜೀವದಾನ ಸಿಕ್ಕಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಕೋಲಾರದಲ್ಲಿ ನಿಂತರೆ ನಮಗೆ ಭಯವಿಲ್ಲ ಎಂದ ಮಾಜಿ ಸಿಎಂ, ಕೋಲಾರದಲ್ಲಿ ಸಿದ್ದರಾಮಯ್ಯಗೆ ಸಮಸ್ಯೆಯೇ ಶ್ರೀನಿವಾಸ್ಗೌಡರು ಎಂದಿದ್ದಾರೆ.
ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಸಿದ್ದರಾಮಯ್ಯ ಬಗ್ಗೆ ಲಘುವಾಗಿ ಮಾತನಾಡಲ್ಲ. ಅವರು ಮಾಜಿ ಮುಖ್ಯಮಂತ್ರಿಗಳು, ಸಚಿವರಾಗಿದ್ದವರು ಹಾಗೂ ಉಪಮುಖ್ಯಮಂತ್ರಿಯಾಗಿದ್ದವರು. ಅವರು ಎಲ್ಲಿ ಬೇಕಾದರೂ ಚುನಾವಣೆಗೆ ನಿಲ್ಲಬಹುದು. ಅವರಿಗೆ ಕ್ಷೇತ್ರವೇ ಇಲ್ಲ ಎಂಬ ಮಾತುಗಳು ನಮಗೆ ಅವಶ್ಯಕತೆ ಇಲ್ಲ ಎಂದರು. ಸಿದ್ದರಾಮಯ್ಯ ಹೋದರು ಕೋಲಾರದಲ್ಲಿ ನಮ್ಮ ಯಾವುದೇ ಕಾರ್ಯತಂತ್ರ ಬದಲಾಗಲ್ಲ. ಕೋಲಾರದಲ್ಲಿ ನಮ್ಮ ಪಕ್ಷಕ್ಕೆ ಸಮರ್ಥ ಅಭ್ಯರ್ಥಿಗಳಿದ್ದಾರೆ. ಸಿದ್ದರಾಮಯ್ಯ ಅಷ್ಟೇ ಅಲ್ಲ, ಯಾರೇ ನಿಂತರೂ ನಮ್ಮ ಪಕ್ಷಕ್ಕೆ ಆತಂಕ ಇಲ್ಲ ಎಂದು ಎಚ್ ಡಿ ಕುಮಾರ ಸ್ವಾಮಿ ಹೇಳಿದರು.