Mysore
15
few clouds

Social Media

ಬುಧವಾರ, 21 ಜನವರಿ 2026
Light
Dark

ಸಿಎಂ ಕಾರ್ಯಕ್ರಮದಲ್ಲಿ ನೂಕು ನುಗ್ಗಲು : 11ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ದಕ್ಷಿಣ ಕನ್ನಡ : ಸಿಎಂ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಪುತ್ತೂರು ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದಿದೆ.

ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ನಡೆದ ಅಶೋಕ ಜನಮನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದು, ಈ ವೇಳೆ ನೂಕುನುಗ್ಗಲು ಸಂಭವಿಸಿದೆ. ಪರಿಣಾಮ ಘಟನೆಯಲ್ಲಿ ಮಹಿಳೆಯರು ಹಾಗೂ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅಸ್ವಸ್ಥರನ್ನು ದಾಖಲಿಸಲಾಗಿದೆ.

ಇದನ್ನು ಓದಿ: RSS ನಿಷೇಧ ಹಾಸ್ಯಾಸ್ಪದ : ಮಾಜಿ ಶಾಸಕ ಬಿ.ಹರ್ಷವರ್ಧನ್

ಅಸ್ವಸ್ಥಗೊಂಡವರು
ಯೋಗಿತ(20), ಸಭಾ ಮಾಡಾವು(20), ಆಮೀನಾ ಪಾಟ್ರಕೋಡಿ(56), ನೇತ್ರಾವತಿ ಇರ್ದೆ(37), ಲೀಲಾವತಿ ಕಡಬ(50), ವಸಂತಿ ಬಲ್ನಾಡ್ (53), ಕುಸುಮ( 62), ರತ್ನವತಿ ಪೆರಿಗೇರಿ (67), ಅಫೀಲಾ ಪಾಟ್ರಕೋಡಿ (20), ಸ್ನೇಹಪ್ರಭಾ (41) ಹಾಗೂ ಜಸೀಲಾ(30)ಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಶಾಸಕ ಅಶೋಕ್ ರೈ ಮಾಲೀಕತ್ವದ ಟ್ರಸ್ಟ್​ನಿಂದ ಯೋಜನೆಗೊಂಡಿದ್ದು, ದೀಪಾವಳಿ ಹಬ್ಬವೆಂದು ಜನರಿಗೆ ತಟ್ಟೆ, ವಸ್ತ್ರ ಹಂಚುವ ಕಾರ್ಯಕ್ರಮವು ಸಹ ಇತ್ತು. ಇನ್ನು ಈ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯನವರು ಉದ್ಘಾಟನೆ ಮಾಡಿದ್ದರು.

ಅಲ್ಪ ಸ್ವಲ್ಪ ಖುರ್ಚಿ ಹಾಕಿದ್ದರಿಂದ ಜಿಲ್ಲಾ ಪೊಲೀಸ್ ಇಲಾಖೆ ಆಯೋಜಕರ ಮೇಲೆ ಗರಂ ಆಗಿದ್ದು, ಹೆಚ್ಚಿನ ಆಸನ ವ್ಯವಸ್ಥೆ ಮಾಡುವಂತೆ ತಾಕೀತು ಮಾಡಿತ್ತು. ಬಳಿಕ ಆಯೋಜಕರು ಸಹ ಹೆಚ್ಚಿನ ಖುರ್ಚಿಗಳನ್ನು ಹಾಕಿದ್ದರು. ಆದರೂ ಸಹ ಈ ದುರ್ಘಟನೆ ನಡೆದಿದೆ.

Tags:
error: Content is protected !!