ದಕ್ಷಿಣ ಕನ್ನಡ : ಸಿಎಂ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಪುತ್ತೂರು ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದಿದೆ.
ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ನಡೆದ ಅಶೋಕ ಜನಮನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದು, ಈ ವೇಳೆ ನೂಕುನುಗ್ಗಲು ಸಂಭವಿಸಿದೆ. ಪರಿಣಾಮ ಘಟನೆಯಲ್ಲಿ ಮಹಿಳೆಯರು ಹಾಗೂ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅಸ್ವಸ್ಥರನ್ನು ದಾಖಲಿಸಲಾಗಿದೆ.
ಇದನ್ನು ಓದಿ: RSS ನಿಷೇಧ ಹಾಸ್ಯಾಸ್ಪದ : ಮಾಜಿ ಶಾಸಕ ಬಿ.ಹರ್ಷವರ್ಧನ್
ಅಸ್ವಸ್ಥಗೊಂಡವರು
ಯೋಗಿತ(20), ಸಭಾ ಮಾಡಾವು(20), ಆಮೀನಾ ಪಾಟ್ರಕೋಡಿ(56), ನೇತ್ರಾವತಿ ಇರ್ದೆ(37), ಲೀಲಾವತಿ ಕಡಬ(50), ವಸಂತಿ ಬಲ್ನಾಡ್ (53), ಕುಸುಮ( 62), ರತ್ನವತಿ ಪೆರಿಗೇರಿ (67), ಅಫೀಲಾ ಪಾಟ್ರಕೋಡಿ (20), ಸ್ನೇಹಪ್ರಭಾ (41) ಹಾಗೂ ಜಸೀಲಾ(30)ಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಶಾಸಕ ಅಶೋಕ್ ರೈ ಮಾಲೀಕತ್ವದ ಟ್ರಸ್ಟ್ನಿಂದ ಯೋಜನೆಗೊಂಡಿದ್ದು, ದೀಪಾವಳಿ ಹಬ್ಬವೆಂದು ಜನರಿಗೆ ತಟ್ಟೆ, ವಸ್ತ್ರ ಹಂಚುವ ಕಾರ್ಯಕ್ರಮವು ಸಹ ಇತ್ತು. ಇನ್ನು ಈ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯನವರು ಉದ್ಘಾಟನೆ ಮಾಡಿದ್ದರು.
ಅಲ್ಪ ಸ್ವಲ್ಪ ಖುರ್ಚಿ ಹಾಕಿದ್ದರಿಂದ ಜಿಲ್ಲಾ ಪೊಲೀಸ್ ಇಲಾಖೆ ಆಯೋಜಕರ ಮೇಲೆ ಗರಂ ಆಗಿದ್ದು, ಹೆಚ್ಚಿನ ಆಸನ ವ್ಯವಸ್ಥೆ ಮಾಡುವಂತೆ ತಾಕೀತು ಮಾಡಿತ್ತು. ಬಳಿಕ ಆಯೋಜಕರು ಸಹ ಹೆಚ್ಚಿನ ಖುರ್ಚಿಗಳನ್ನು ಹಾಕಿದ್ದರು. ಆದರೂ ಸಹ ಈ ದುರ್ಘಟನೆ ನಡೆದಿದೆ.
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…