ರಾಜ್ಯ

ವಿದೇಶದಲ್ಲಿ ಅಧ್ಯಯನ ಯೋಜನೆಯಡಿ 5,000 ಕ್ಕೂ ಹೆಚ್ಚು ಆಕಾಂಕ್ಷಿಗಳ ನೊಂದಣಿ

ಬೆಂಗಳೂರು : ಕೌಶಲ್ಯಾಭಿವೃದ್ಧಿ ಇಲಾಖೆಯ ಅಡಿಯಲ್ಲಿ ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ (ಕೆವಿಟಿಎಸ್‌ಡಿಸಿ) ಮೂಲಕ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ವಿದೇಶ ಅಧ್ಯಯನ ಉಪಕ್ರಮಕ್ಕೆ 5,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

ವಿದ್ಯಾರ್ಥಿಗಳು ಇನ್ನಷ್ಟು ಹೆಚ್ಚಿನ ಭಾಗವಹಿಸುವಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಇಲಾಖೆಯು, ಭಾನುವಾರ (ಆಗಸ್ಟ್ 17) ಹೋಟೆಲ್ ಲಲಿತ್ ಅಶೋಕ್‌ನಲ್ಲಿ ವಿದೇಶ ಅಧ್ಯಯನ ಎಕ್ಸ್ ಪೋ ಆಯೋಜಿಸಿದೆ. ಇನ್ನಷ್ಟು ಮಂದಿ ನೊಂದಣಿ ಮಾಡಿಕೊಳ್ಳುವ ಸಾಧ್ಯತೆಯೂ ಇದೆ.

ಕರ್ನಾಟಕದ ವಿದ್ಯಾರ್ಥಿಗಳಿಗೆ ಆಕರ್ಷಕ ಶೈಕ್ಷಣಿಕ ಅವಕಾಶಗಳನ್ನು ನೀಡುವ 60 ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ವಿಶ್ವವಿದ್ಯಾಲಯಗಳು ಈಗಾಗಲೇ ಎಕ್ಸ್ ಪೋ ನಡೆಯುವ ಲಲಿತ್ ಅಶೋಕ್ ಹೊಟೇಲ್ ಗೆ ಬಂದಿವೆ. ಭಾನುವಾರ ದಿನಪೂರ್ತಿ ಈ ಪ್ರದರ್ಶನ ನಡೆಯಲಿದೆ. ಹಣಕಾಸಿನ ಸಮಸ್ಯೆಯನ್ನು ಸೇರಿದಂತೆ ಹಲವು ಸಮಸ್ಯೆಗಳಿಗೆ ಪರಿಹಾರವನ್ನು ಈ ವೇದಿಕೆ ಒದಗಿಸಿಕೊಡಲಿದೆ.

ಸಾರ್ವಜನಿಕ ಮತ್ತು ಖಾಸಗಿ ಬ್ಯಾಂಕುಗಳು ಸ್ಪರ್ಧಾತ್ಮಕ ಬಡ್ಡಿದರಗಳಲ್ಲಿ ಶಿಕ್ಷಣ ಸಾಲಗಳನ್ನು ನೀಡುವ ಮಳಿಗೆಗಳನ್ನು ಹಾಕಲಾಗಿವೆ. ಸಾರ್ವಜನಿಕ ಸಂಸ್ಥೆಯಾದ ಕರ್ನಾಟಕ ಬ್ಯಾಂಕ್ ಸರ್ಕಾರಕ್ಕೆ ಅತ್ಯಂತ ವಿದ್ಯಾರ್ಥಿ ಸ್ನೇಹಿ ಹಣಕಾಸು ಪ್ಯಾಕೇಜ್‌ಗಳ ಭರವಸೆ ನೀಡಿರುವುದು ಪ್ರಮುಖ ಆಕರ್ಷಣೆಯಾಗಿದೆ.

“ವಿದೇಶದಲ್ಲಿ ಅಧ್ಯಯನ ಮಾಡುವುದು ಇನ್ನು ಮುಂದೆ ಶ್ರೀಮಂತರಿಗೆ ಮಾತ್ರ ಮೀಸಲಾಗಿರುವ ಸವಲತ್ತು ಅಲ್ಲ. ನಮ್ಮ ಸರ್ಕಾರದ ಈ ಕ್ರಮದಿಂದಾಗಿ, ಆರ್ಥಿಕವಾಗಿ ದುರ್ಬಲ ಹಿನ್ನೆಲೆಯ ವಿದ್ಯಾರ್ಥಿಗಳು ಸಹ ಈಗ ಆರ್ಥಿಕ ಹೊರೆಯಿಲ್ಲದೆ ವಿದೇಶದಲ್ಲಿ ಉನ್ನತ ಶಿಕ್ಷಣವನ್ನು ಪಡೆಯಬಹುದು. ಇದು ಭಾರತದಲ್ಲಿ ಇದೇ ರೀತಿಯ ಮೊದಲ ಯೋಜನೆಯಾಗಿದ್ದು,ಜಾಗತಿಕ ಶಿಕ್ಷಣವನ್ನು ಸಮಾಜದ ಎಲ್ಲಾ ವರ್ಗಗಳಿಗೂ ಲಭ್ಯವಾಗುವಂತೆ ಮಾಡಿದೆ” ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಆರ್‌. ಪಾಟೀಲ್ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಭಾರತದಿಂದ ವಿದೇಶಕ್ಕೆ ಹೊರ ಹೋದ ನಂತರವೂ ಬೆಂಬಲ ನೀಡಲಾಗುವುದು. ಖಾಸಗಿ ಕಾರ್ಯಕ್ರಮಗಳಿಗಿಂತ ಭಿನ್ನವಾಗಿ, ಸರ್ಕಾರಿ ಬೆಂಬಲಿತ ಯೋಜನೆಯು ವಿದೇಶದಲ್ಲಿ ನಿರಂತರ ಸಹಾಯವನ್ನು ಒದಗಿಸುತ್ತದೆ. ಭಾಗವಹಿಸಲು ಇಚ್ಛಿಸುವ ವಿದ್ಯಾರ್ಥಿಗಳು ಈ ಕೆಳಕಂಡ ವೆಬ್ ಸೈಟ್ ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. http://studyabroad.ksdckarnataka.com

ಆಂದೋಲನ ಡೆಸ್ಕ್

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

2 hours ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

2 hours ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

4 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

4 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

5 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

5 hours ago