ಬೆಂಗಳೂರು: ಕಾಳಿ ನದಿಗೆ ನಿರ್ಮಿಸಿರುವ ಸೂಪಾ ಜಲಾಶಯ ಗರಿಷ್ಠ ಮಟ್ಟ ತಲುಪುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ ಹೆಚ್ಚುವರಿ ನೀರು ಹೊರಬಿಡುವ ಸಾಧ್ಯತೆ ಇದ್ದು, ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಅಣೆಕಟ್ಟೆಯ ಕೆಳದಂಡೆಯಲ್ಲಿರುವ ಜನರಿಗೆ ಕೆಪಿಸಿಎಲ್ ಮನವಿ ಮಾಡಿದೆ.
ಸೂಪಾ ಜಲಾಶಯದ ಜಲಾನಯನ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ನೀರಿನ ಒಳಹರಿವು ಹೆಚ್ಚಾಗಿರುವುದರಿಂದ ಜಲಾಶಯದ ನೀರಿನ ಮಟ್ಟ ಸತತವಾಗಿ ಏರಿಕೆಯಾಗುತ್ತಿದೆ. ಜಲಾಶಯದ ಗರಿಷ್ಠ ಮಟ್ಟ 564 ಮೀಟರ್ ಆಗಿದ್ದು, ನೀರಿನ ಸಂಗ್ರಹಣಾ ಸಾಮರ್ಥ್ಯ 147.55 ಟಿಎಂಸಿ ಆಗಿದೆ. ಪ್ರಸ್ತುತ (ಆ. 25ರಂದು) 558.95 ಅಡಿಗೂ ಹೆಚ್ಚು ನೀರು ನಿಂತಿದ್ದು, 126.662 ಟಿಎಂಸಿ ನೀರು ಸಂಗ್ರಹವಾಗಿದೆ. ಅಲ್ಲದೆ, ಜಲಾಶಯದ ಒಳಹರಿವು 25,954 ಕ್ಯುಸೆಕ್ ಇದೆ.
ಇದೇ ರೀತಿ ಒಳಹರಿವು ಮುಂದುವರಿದರೆ ಜಲಾಶಯವು ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇದ್ದು, ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಯಾವುದೇ ಸಮಯದಲ್ಲಿ ಜಲಾಶಯದಿಂದ ಹೊರಬಿಡಬೇಕಾಗುತ್ತದೆ. ಆದ್ದರಿಂದ ಅಣೆಕಟ್ಟೆಯ ದಂಡೆಯಲ್ಲಿರುವ ಮತ್ತು ನದಿಯ ಪಾತ್ರದುದ್ದಕ್ಕೂ ಇರುವ ಸಾರ್ವಜನಿಕರು ತಮ್ಮ ಜನ, ಜಾನುವಾರು ಇತ್ಯಾದಿಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಬೇಕು ಎಂದು ಕೆಪಿಸಿಎಲ್ ಮನವಿ ಮಾಡಿದೆ.
ಅಲ್ಲದೆ, ಸೂಪಾ ಅಣೆಕಟ್ಟೆಯ ಕೆಳಭಾಗದ ನದಿ ಪಾತ್ರದಲ್ಲಿ ದೋಣಿ ಸಂಚಾರ, ಮೀನುಗಾರಿಕೆ, ಜಲ ಸಾಹಸ ಕ್ರೀಡೆಗಳು ಸೇರಿದಂತೆ ಇತರೆ ಚಟುವಟಿಕೆಗಳನ್ನು ಮಳೆಗಾಲ ಮುಗಿಯುವವರೆಗೂ ನಡೆಸಬಾರದು ಎಂದು ಇದೇ ವೇಳೆ ಕೋರಿದೆ.
ಹೊಸದಿಲ್ಲಿ : ವೋಟ್ ಚೋರಿ ವಿರುದ್ಧ ಮತ್ತೆ ರಾಷ್ಟ್ರ ಮಟ್ಟದಲ್ಲಿ ಅಬ್ಬರಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು…
ಬೆಂಗಳೂರು : ಕಾಂಗ್ರೆಸ್ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(95) ಅವರು ನಿಧನರಾಗಿದ್ದಾರೆ.…
ತುಮಕೂರು : ವಿರೋಧ ಪಕ್ಷದವರು ಪದೇ ಪದೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ವಿರೋಧಿಸುತ್ತಾರೆ. ಗ್ಯಾರಂಟಿ ಕೊಡದೆ ರಸ್ತೆ,…
ಹೊಸದಿಲ್ಲಿ : ಇಂದು ನನ್ನ ಮಗನಿಗೆ ಎಂಟು ಗಂಟೆಯ ಆಪರೇಷನ್ ಇತ್ತು. ಪತ್ನಿ, ಮಗಳು ಎಲ್ಲರೂ ಫೋನ್ ಮಾಡಿ ಬಹಳ…
ಮೈಸೂರು : ನಿರ್ದಿಷ್ಟ ಬ್ರಾಂಡ್ನ ಮೊಟ್ಟೆಗಳಲ್ಲಿ ಕ್ಯಾನ್ಸರ್ಗೆ ಕಾರಣವಾಗುವ 'ಜಿನೋಟಾಕ್ಸಿಕ್ ಅಂಶ' ಪತ್ತೆಯಾಗಿದೆ ಎಂದು ಹೇಳುವ ವೈರಲ್ ವಿಡಿಯೋ ಇದೀಗ…
ಬೆಳಗಾವಿ : ಮರಾಠರು ಮುಸ್ಲಿಂ ವಿರೋಧಿ ಅಂತ ಹಣೆಪಟ್ಟಿ ಕಟ್ಟಿಕೊಂಡಿದ್ದೇವೆ. ನಾವು ಮೊಘಲರ ವಿರುದ್ಧ ಇದ್ದೆವು. ಆದರೆ ಮುಸ್ಲಿಂರ ವಿರೋಧಿಗಳಾಗಿರಲಿಲ್ಲ.…