ರಾಜ್ಯ

ರಾಜ್ಯ ಸರ್ಕಾರ ಸರಿಯಾಗಿ ಹಣಕಾಸು ನಿರ್ವಹಣೆ ಮಾಡದೇ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಹುಬ್ಬಳ್ಳಿ: ರಾಜ್ಯ ಸರ್ಕಾರ ಸರಿಯಾದ ರೀತಿಯಲ್ಲಿ ಹಣಕಾಸು ನಿರ್ವಹಣೆ ಮಾಡದೇ ಕೇಂದ್ರದ ಮೇಲೆ ಅನವಶ್ಯಕವಾಗಿ ಗೂಬೆ ಕೂರಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ತಿರುಗೇಟು ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಯುಪಿಎ ಅವಧಿಗಿಂತ ಎನ್‌ಡಿಎ ಸರ್ಕಾರ ಎರಡರಷ್ಟು ಅನುದಾನವನ್ನು ನೀಡಿದೆ. ಅಲ್ಲದೇ, ಕೇಂದ್ರ ಸರ್ಕಾರ ರಾಜ್ಯಗಳಿಗೆ ಅನುದಾನ ಹಂಚಿಕೆ ಬಿಡುಗಡೆ ಮಾಡುವುದನ್ನು ನಿರ್ಧರಿಸಿಲ್ಲ. ಅದರ ಬದಲಾಗಿ ಕೇಂದ್ರ ಹಣಕಾಸು ನಿಯೋಗ ನಿಗದಿಪಡಿಸಿದಷ್ಟು ಹಣವನ್ನು ಮಾತ್ರ ಕೇಂದ್ರ ನೀಡಿದೆ ಎಂದು ಹೇಳಿದರು.

ಕಳೆದ 2016-17ರ ಅವಧಿಯಲ್ಲಿ ಕೇಂದ್ರ ಹಣಕಾಸು ಆಯೋಗ ಅನುದಾನ ಹಂಚಿಕೆಯನ್ನು ನಿಗದಿಪಡಿಸಿತ್ತು. ಆಗ ಅಧಿಕಾರದಲ್ಲಿದ್ದವರು ಸಿಎಂ ಸಿದ್ದರಾಮಯ್ಯನವರೇ. ಆ ಸಂದರ್ಭದಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಆಯೋಗದ ಮುಂದೆ ಧ್ವನಿ ಎತ್ತದೆ ಈಗ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

 

ಆಂದೋಲನ ಡೆಸ್ಕ್

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

8 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

9 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

9 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

9 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

9 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

10 hours ago