ಬೆಂಗಳೂರು: ಮಂಡ್ಯ ಜಿಲ್ಲೆ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಪಿ.ಎಂ ನರೇಂದ್ರ ಸ್ವಾಮಿ ಅವರನ್ನು ರಾಜ್ಯ ಸರ್ಕಾರಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.
ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ನರೇಂದ್ರ ಸ್ವಾಮಿಗೆ ಅತ್ಯಂತ ಪ್ರತಿಷ್ಠೆಯ ಹಾಗೂ ಅಷ್ಟೇ ಮಹತ್ವದ್ದು ಎನಿಸಿದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ
ಬುಧವಾರ ಸಂಜೆ ಸರ್ಕಾರ ಆದೇಶ ಹೊರಡಿಸಿದೆ.
ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯಿದೆ, 1974 ರ ಸೆಕ್ಷನ್ 4 (2) ಅಡಿಯಲ್ಲಿ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ನಾಮನಿರ್ದೇಶನ ಮತ್ತು ಸದಸ್ಯ ನಿಯಮಗಳ ಅಧ್ಯಕ್ಷರು ಮತ್ತು ಸದಸ್ಯ ನಿಯಮಗಳ ಅಧ್ಯಕ್ಷರು) ನಿಯಮಗಳು, 2024 ಅಧಿಸೂಚನೆ ಸಂಖ್ಯೆ. FEE 526 EPC 2024 (ಭಾಗ-1), ದಿನಾಂಕ: 18.12.2024 ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶಗಳವರೆಗೆ ತಕ್ಷಣವೇ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾಗಿ ನಾಮನಿರ್ದೇಶನ ಮಾಡಲಾಗಿದೆ.