ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ನಾಡಿನ ಹಿರಿಯ ಸಾಹಿತಿ ಎಸ್.ಎಲ್.ಬೈರಪ್ಪ ಅವರಿಂದು ವಿಧಿವಶರಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಭೈರಪ್ಪ ಅವರಿಂದು ಬೆಂಗಳೂರಿನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಭೈರಪ್ಪ ಅವರ ನಿಧನಕ್ಕೆ ಗಣ್ಯಾತಿಗಣ್ಯರು ಕಂಬನಿ ಮಿಡಿದಿದ್ದು, ಸಂತಾಪ ಸೂಚಿಸಿದ್ದಾರೆ.
ಪರ್ವ, ಉತ್ತರಕಾಂಡ, ವಂಶವೃಕ್ಷ, ಆವರಣ ಸೇರಿದಂತೆ ಹಲವು ಕೃತಿಗಳನ್ನು ಭೈರಪ್ಪ ರಚಿಸಿದ್ದರು.
ಭೈರಪ್ಪ ಅವರ ಅನೇಕ ಕೃತಿಗಳು ಮರಾಠಿ, ಗುಜರಾತ್ ಸೇರಿದಂತೆ ದೇಶದ ಅನೇಕ ಭಾಷೆಗಳಿಗೆ ಅನುವಾದಗೊಂಡಿವೆ.
ಕಳೆದ 2019ರಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರು ಮೈಸೂರು ದಸರಾವನ್ನು ಉದ್ಘಾಟಿಸಿದ್ದರು. ಈ ವೇಳೆ ಬಿ.ಎಸ್.ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗಿದ್ದರು.





