ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಉಗ್ರ ದಾಳಿ ನಂತರ ಕಾಶ್ಮೀರದ ವಿವಿಧೆಡೆ ಸಿಲುಕಿದ್ದ ಸುಮಾರು 178 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆ ತರಲಾಯಿತು.
ಗುರುವಾರ ಮಧ್ಯಾಹ್ನ 12:30ರ ಸುಮಾರಿಗೆ ಕನ್ನಡಿಗರನ್ನು ಹೊತ್ತ ವಿಮಾನ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು.
ದಾಳಿಯ ಮಾಹಿತಿ ಸಿಕ್ಕ ತಕ್ಷಣ ರಾಜ್ಯ ಸರ್ಕಾರ ಎರಡು ವಿಶೇಷ ತಂಡಗಳನ್ನು ಕಾಶ್ಮೀರಕ್ಕೆ ಕಳುಹಿಸಿಕೊಟ್ಟಿತ್ತು. ಕಾರ್ಮಿಕ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಕನ್ನಡಿಗರನ್ನು ವಾಪಸ್ ಕರೆತರುವ ಕಾರ್ಯಾಚರಣೆ ನಡೆಸಲಾಗಿತ್ತು




