ರಾಜ್ಯ

ಪಂಚಭೂತಗಳಲ್ಲಿ ಲೀನರಾದ ಭರತ್‌ ಭೂಷಣ್‌ ಹಾಗೂ ಮಂಜುನಾಥ್‌

ಬೆಂಗಳೂರು: ಜಮ್ಮುಕಾಶ್ಮೀರದ ಪುಹಲ್ಗಾಮ್‍ನ ಪ್ರಕೃತಿ ಸೌಂದರ್ಯವನ್ನು ಸವಿಯಲು ತೆರಳಿದ್ದ ವೇಳೆ ಉಗ್ರರ ಗುಂಡಿಗೆ ಬಲಿಯಾದ ಇಬ್ಬರು ಕನ್ನಡಿಗರ ಅಂತ್ಯಕ್ರಿಯೆ ಗುರುವಾರ ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿತು.

ಬೆಂಗಳೂರಿನ ಮತ್ತಿಕೆರೆ ನಿವಾಸಿ ಭರತ್ ಭೂಷಣ್‌ ಹಾಗೂ ಶಿವಮೊಗ್ಗದ ಮಂಜುನಾಥ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರಾವಧರಗಳೊಂದಿಗೆ ನೆರವೇರಿಸಲಾಯಿತು.

ಭರತ್‍ಭೂಷಣ್ ಅಂತ್ಯಕ್ರಿಯೆ ಒಕ್ಕಲಿಗ ವಿಧಿವಿಧಾನದಂತೆ ಹೆಬ್ಬಾಳದ ವಿದ್ಯುತ್ ಚಿತಾಗಾರದಲ್ಲಿ ನೆರವೇರಿದರೆ, ಮಂಜುನಾಥ್ ಅವರ ಅಂತ್ಯಸಂಸ್ಕಾರವು ಶಿವಮೊಗ್ಗದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಪುತ್ರ ನೆರವೇರಿಸಿಕೊಟ್ಟರು.

ಇದಕ್ಕೂ ಮುನ್ನ ಶ್ರೀನಗರದಿಂದ ಆಗಮಿಸಿದ ಇಬ್ಬರ ಕಳೆಬರಹವನ್ನು ವಿಮಾನ ನಿಲ್ದಾಣದಲ್ಲಿ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಮತ್ತಿತರರು ಬರಮಾಡಿಕೊಂಡರು.

ಅಲ್ಲಿಂದ ನೇರವಾಗಿ ಬೆಂಗಳೂರಿನ ಮತ್ತಿಕೆರೆಯಲ್ಲಿರುವ ಭರತ್ ಭೂಷಣ್ ನಿವಾಸಕ್ಕೆ ಕರೆತರಲಾಗಿತ್ತು. ಪ್ರವಾಸದಿಂದ ಮಗ ವಾಪಸ್ ಬರುವ ನಿರೀಕ್ಷೆಯಲ್ಲಿದ್ದ ಭರತ್ ಭೂಷಣ್ ತಾಯಿ ಮೃತದೇಹದ ಮುಂದೆ ಕಣ್ಣೀರಿಟ್ಟ ದೃಶ್ಯ ಎಲ್ಲರ ಮನ ಕಲಕುವಂತಿತ್ತು. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ರಾಜಕೀಯ ನಾಯಕರು ಮೃತರ ನಿವಾಸಕ್ಕೆ ಭೇಟಿ ನೀಡಿ ಅವರ ಪತ್ನಿ ಸುಜಾತಾ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಆಂದೋಲನ ಡೆಸ್ಕ್

Recent Posts

ಕಾಪಿ ಮಾಡು ಎಂದು ಹೇಳಿದ ಗುರುಗಳ ಮಾತನ್ನು ಧಿಕ್ಕರಿಸಿದೆ, ಆದರೆ ಅವರನ್ನು ದ್ವೇಷಿಸಲಿಲ್ಲ

ನಮ್ಮ ತಂದೆ ಪೋರ್‌ಬಂದರನ್ನು ಬಿಟ್ಟು ರಾಜ ಕೋಬಿಯ ರಾಜಾಸ್ಥಾನಿಕ ನ್ಯಾಯಾಲಯದ ಸದಸ್ಯರಾಗಿ ಹೊರಟಾಗ, ನನಗೆ ಕೇವಲ ಏಳು ವರ್ಷಗಳು. ಅಲ್ಲಿ…

2 hours ago

ರಾಷ್ಟ್ರಪಿತನ ‘ಸತ್ಯಾನ್ವೇಷಣೆ’ಗೆ ನೂರು ವರುಷ

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಹಭಾಗಿತ್ವದಲಿ ಎಳೆಯ ಮಕಳ ಅಂಗಳಕೆ…

3 hours ago

ಡಿಜಿಟಲ್ ವೇದಿಕೆಗಳಲ್ಲಿ ಅಶ್ಲೀಲತೆಯ ಆರ್ಭಟ

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳು ಸೃಜನಶೀಲತೆಯ ವೇದಿಕೆಗಳಾಗುವ ಬದಲು ಹಣದಾಸೆಗಾಗಿ ಅಶ್ಲೀಲತೆಯನ್ನು ಪ್ರದರ್ಶಿಸುವ ಮಾರುಕಟ್ಟೆಗಳಾಗುತ್ತಿರುವುದು ಆತಂಕಕಾರಿ ವಿದ್ಯಮಾನ. ಪ್ರಭಾವಿ ವ್ಯಕ್ತಿಗಳು…

3 hours ago

ಮೆದಗನಾಣೆ ಗ್ರಾಮಕ್ಕೆ ಕೊನೆಗೂ ವಿದ್ಯುತ್ ಸಂಪರ್ಕ

೮ ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಆದಿವಾಸಿ ಹೋರಾಟ ಸಮಿತಿ ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಮೆದಗನಾಣೆ…

3 hours ago

ಚಾರಣಕ್ಕೆ ನೇಚರ್ ಗೈಡ್ ಕಡ್ಡಾಯ

ಜಿಪಿಎಸ್ ವಾಕಿಟಾಕಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ ಎಸ್‌ಒಪಿ ಬಿಡುಗಡೆ ಮಾಡಿದ ಸಚಿವ ಈಶ್ವರ್‌ ಖಂಡ್ರೆ  ಬೆಂಗಳೂರು: ರಾಜ್ಯದಲ್ಲಿ ಅರಣ್ಯ ಇಲಾಖೆ…

3 hours ago