ರಾಜ್ಯ

pahalgam terror attack | ಭರತ್‌ ಭೂಷಣ್‌ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಸಾಂತ್ವನ

  • ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ; ಸಿಎಂ

ಬೆಂಗಳೂರು : ಕಾಶ್ಮೀರದ ಪೆಹಲ್ಗಾಮನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟ ಭರತ್‌ ಭೂಷಣ್‌ ಅವರ ಪಾರ್ಥಿವ ಶರೀರವನ್ನು ಗುರವಾರ ಬೆಳಿಗ್ಗೆ 5:30ರ ಹೊತ್ತಿಗ ಇಲ್ಲಿನ ಸುಂದರ ನಗರಕ್ಕೆ ತರಲಾಯಿತು.

ಪಾರ್ಥಿವ ಶರೀರ ಮನೆ ತಲುಪುತ್ತಿದ್ದಂತೆ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಭರತ್‌ ಪತ್ನಿ ಸುಜಾತಾ ಅವರು ತಮ್ಮ ಮಗನನ್ನು ಎದೆಗವಚಿಕೊಂಡು ಬಿಕ್ಕಿ ಬಿಕ್ಕಿ ಅಳುತ್ತಿದ್ದರು. ಕುಟುಂಬ ಹಾಗೂ ಸ್ನೇಹಿತರು ಅವರನ್ನು ಸಂತೈಸುತ್ತಿದ್ದ ದೃಶ್ಯ ಮನಕುಲಕುವಂತಿತ್ತು.

ಸಿಎಂ ಸಿದ್ದರಾಮಯ್ಯ ಭರತ್‌ ನಿವಾಸಕ್ಕೆ ತೆರಳಿ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ಹೇಳಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರವನ್ನು ಘೋಷಿಸಲಾಗಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದು ತಿಳಿಸಿದರು.

ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಭರತ್ ಭೂಷಣ್ ಅವರಿಗೆ ಕನ್ನಡ ನಾಡಿನ ಸಮಸ್ತ ಕನ್ನಡಿಗರ ಪರವಾಗಿ ಶ್ರದ್ಧಾಂಜಲಿಯನ್ನು ಅರ್ಪಿಸಿದ ಮುಖ್ಯಮಂತ್ರಿಗಳು, ಉತ್ತಮ ಶಿಕ್ಷಣ ಪಡೆದಿದ್ದ ತರುಣರಾಗಿದ್ದ ಭರತ್ ಭೂಷಣ್ ಅವರು ಉಗ್ರರ ದಾಳಿಗೆ ಬಲಿಯಾಗಿರುವುದು ದುರದೃಷ್ಟಕರ. ಉಗ್ರರ ದಾಳಿ ಅಮಾನವೀಯವಾದ ಕೃತ್ಯವಾಗಿ ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದರು.

ಅಮಾಯಕ ಜನರನ್ನು ಕೊಲ್ಲುವುದು ಹ್ಯೇಯಕೃತ್ಯ: 

ಉಗ್ರರನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ನಮ್ಮ ಸರ್ಕಾರ ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಗ್ರಹಿಸಿ, ಉಗ್ರರನ್ನು ಸದೆಬಡಿಯುವ ನಿಟ್ಟಿನಲ್ಲಿ ಕೇಂದ್ರಕ್ಕೆ ಸಂಪೂರ್ಣ ಬೆಂಬಲ ನೀಡುತ್ತದೆ. ಅಮಾಯಕ ಜನರನ್ನು ಹಾಡುಹಗಲೇ, ತಮ್ಮ ಕುಟುಂಬದವರ ಎದುರು ಕೊಲ್ಲುವುದು ಹ್ಯೇಯಕೃತ್ಯ. ಕಾಶ್ಮೀರದಲ್ಲಿ ಈ ಹಿಂದೆಯೂ ಪುಲ್ವಾಮಾ ಬಾಲಾಕೋಟ್ ಘಟನೆ ನಡೆದಿದ್ದು, ಪುನ: ಅಂತಹ ಘಟನೆ ಮರುಕಳಿಸಿದೆ. ಇಂತಹ ಘಟನೆ ನಡೆಯಲು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವೂ ಇರಬಹುದು ಎಂದರು.

ಕನ್ನಡಿಗರಾದ ಭರತ್ ಭೂಷಣ್ , ಮಂಜುನಾಥ್ ರಾವ್ ಹಾಗೂ ಬೆಂಗಳೂರಿನಲ್ಲಿ ನೆಲಿಸಿದ್ದ ಮಧುಸೂದನ್ ಅವರು ಮೃತಪಟ್ಟಿದ್ದಾರೆ. ಬೆಂಗಳೂರಿನ ಭರತ್ ಭೂಷಣ್ ಕುಟುಂಬದೊಂದಿಗೆ ಸಚಿವ ರಾಮಲಿಂಗಾರೆಡ್ಡಿಯವರನ್ನು ಹಾಗೂ ಶಿವಮೊಗ್ಗದ ಮಂಜುನಾಥ್ ರಾವ್ ಅವರ ಕುಟುಂಬದವರನ್ನು ಸಚಿವ ಮಧುಬಂಗಾರಪ್ಪ ಅವರು ಭೇಟಿಯಾಗಿದ್ದು, ಕುಟುಂಬಕ್ಕೆ ಸಹಕಾರ ನೀಡುವಂತೆ ಸೂಚನೆ ನೀಡಲಾಗಿದೆ. ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರ ತಲಾ 10 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದು, ಕುಟುಂಬಕ್ಕೆ ಸರ್ಕಾರದ ಬೆಂಬಲವಿದೆ ಎಂದರು.

ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆ ಹಾಗೂ ಘಟನೆಯಲ್ಲಿ ಮೃತಪಟ್ಟವರ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ಕರೆತರುವ ವ್ಯವಸ್ಥೆಗಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹಾಗೂ ಅಧಿಕಾರಿಗಳ ತಂಡವನ್ನು ಕೂಡಲೇ ಕಳುಹಿಸಿಕೊಡಲಾಗಿತ್ತು. 175 ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುತ್ತಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದರು.

ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೆಲವು ಕ್ರಮಗಳನ್ನು ಈಗಾಗಲೇ ಕೈಗೊಂಡಿದೆ. ಉಗ್ರರನ್ನು ಮಟ್ಟ ಹಾಕುವ ಇನ್ನೂ ಹೆಚ್ಚಿನ ಕ್ರಮಗಳಿಗೆ ರಾಜ್ಯಸರ್ಕಾರದ ಸಂಪೂರ್ಣ ಬೆಂಬಲವಿರಲಿದೆ ಎಂದರು.

ಆಂದೋಲನ ಡೆಸ್ಕ್

Recent Posts

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

18 mins ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

29 mins ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

32 mins ago

ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿ.ಎಂ.ಸಿದ್ದರಾಮಯ್ಯ ಕರೆ

ಬೆಂಗಳೂರು : ಕಾಂಗ್ರೆಸ್‌ ಎಂದರೆ ಕೇವಲ ಒಂದು ರಾಜಕೀಯ ಪಕ್ಷವಲ್ಲ. ಇದೊಂದು ಚಳುವಳಿ ಮತ್ತು ಸಿದ್ಧಾಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

39 mins ago

ಬೀದಿನಾಯಿ ದಾಳಿ : ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರಿಗೆ ಗಾಯ

ಗೋಣಿಕೊಪ್ಪ : ಪಟ್ಟಣದಲ್ಲಿ ಬೀದಿನಾಯಿ ದಾಳಿಗೆ ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಈ ಘಟನೆಯಿಂದ ಎಚ್ಚೆತ್ತ ಸ್ಥಳೀಯರು ಮತ್ತಷ್ಟು…

53 mins ago

ಕನ್ನಡ ನಾಡು ನುಡಿ ನಮ್ಮ ಹೆಮ್ಮೆ : ಹಾಡಿ ಹೊಗಳಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಕನ್ನಡ ನಾಡು-ನುಡಿ ನಮ್ಮ ಹೆಮ್ಮೆ, ಕನ್ನಡ ಭೂಮಿ ನಮ್ಮ ಹೆಮ್ಮೆಯಾಗಿದೆ ಎಂದು ಪ್ರಧಾನಿ ನರೇಂದ್ರಮೋದಿ ಅವರು ಮುಕ್ತಕಂಠದಿಂದ…

55 mins ago