ರಾಜ್ಯ

Pahalgam Terror Attack | ರಕ್ಷಣೆಗೆ ತೆರಳಿದ ಸಚಿವ ಸಂತೋಷ್‌ ಲಾಡ್‌ ಹೇಳಿದ್ದೇನು?

ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‍ನಲ್ಲಿ ಉಗ್ರರ ದಾಳಿ (Pahalgam Terror Attack) ಯಲ್ಲಿ ನಡೆದ ದೃಶ್ಯಗಳು ಅತ್ಯಂತ ಘೋರ ಮತ್ತು ಭಯಾನಕ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿಶ್ಲೇಷಿಸಿದ್ದಾರೆ.

ಜಮ್ಮು -ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತಂದ ಬಳಿಕ ವಿಮಾನನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಹಾರ ಕಾರ್ಯಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಹಕಾರ ಮತ್ತು ಸೂಚನೆಗಳು ಶ್ಲಾಘನೀಯ. ಪೊಲೀಸ್ ಅಧಿಕಾರಿ ಚೇತನ್ ಅವರ ಸಹಕಾರವೂ ಸ್ಮರಣೀಯ ಎಂದರು.

ಶೇ.99ರಷ್ಟು ನಮ್ಮ ಕಾರ್ಯಾಚರಣೆ ಯಶಸ್ವಿಯಾಗಿದೆ. ಜಮು ಕಾಶ್ಮೀರದಿಂದ ಕನ್ನಡಿಗರ ಸಹಕಾರವೂ ಅವಿಸ್ಮರಣೀಯ. 177 ಕನ್ನಡಿಗರನ್ನು ಶ್ರೀನಗರದಿಂದ ಬೆಂಗಳೂರಿಗೆ ಕರೆತರಲಾಗಿದೆ. ಇನ್ನೂ ಕೆಲವರು ಜಮ್ಮು ಮತ್ತು ಕಟ್ರದಲ್ಲಿದ್ದಾರೆ. ಅವರಿಗೆ ಈಗಾಗಲೇ ಮಾರ್ಗದರ್ಶನ ನೀಡಲಾಗಿದ್ದು, ಸ್ಥಳೀಯ ಅಧಿಕಾರಿಗಳ ಜೊತೆ ಚರ್ಚಿಸಿ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು ಪ್ರವಾಸದ ಯೋಜನೆ ರೂಪಿಸಿಕೊಳ್ಳುವಂತೆ ಸಲಹೆ ನೀಡಲಾಗಿದೆ ಎಂದು ಹೇಳಿದರು.

ಸಂಕಷ್ಟಕ್ಕೆ ಸಿಲುಕಿದವರನ್ನು ಸುರಕ್ಷಿತವಾಗಿ ಕರೆತರಲು ಮುಖ್ಯಮಂತ್ರಿಯವರ ಸೂಚನೆಯಂತೆ ನಾನು ಯಶಸ್ವಿಯಾಗಿದ್ದೇನೆ. ಪಹಲ್ಗಾಮ್‍ನಲ್ಲಿ ದಾಳಿಯ ಬಳಿಕ ಅಲ್ಲಿನ ವಾತಾವರಣವನ್ನು ಮಾತಿನಲ್ಲಿ ವರ್ಣಿಸಲು ಸಾಧ್ಯವಿಲ್ಲ ಎಂದು ದುಗುಡ ವ್ಯಕ್ತಪಡಿಸಿದರು.

ಇದು ಅತ್ಯಂತ ಭಯಾನಕವಾದ ಅನುಭವ. ಹೆಣ್ಣುಮಕ್ಕಳ ಕಣ್ಣೆದುರೇ ಅವರ ಗಂಡನನ್ನು ಕೊಲ್ಲಲಾಗಿದೆ. ಆ ವೇಳೆ ಹೆಣ್ಣುಮಕ್ಕಳು ನಮನ್ನೂ ಕೊಲ್ಲಿ ಎಂದು ಪ್ರತಿರೋಧಿಸಿರುವ ಧೈರ್ಯ ಪ್ರದರ್ಶಿಸಿರುವುದು ವರ್ಣಿಸಲು ಸಾಧ್ಯವಿಲ್ಲ. ನಮ್ಮ ದೇಶದ ಹೆಣ್ಣು ಮಕ್ಕಳು ಮಾತ್ರ ಈ ರೀತಿ ಧೈರ್ಯ ಪ್ರದರ್ಶಿಸಲು ಸಾಧ್ಯ. ಇದನ್ನು ನಾನು ಕಣ್ಣಿನಲ್ಲಿ ನೇರವಾಗಿ ನೋಡಿಲ್ಲ. ಆದರೆ ಕೇಳಿ ತಿಳಿದುಕೊಂಡ ಪ್ರಕಾರ ಅತೀ ಘೋರವಾಗಿದೆ ಎಂದರು.

ಭದ್ರತಾ ಲೋಪದ ಬಗ್ಗೆ ಈ ಸಂದರ್ಭದಲ್ಲಿ ನಾನು ಮಾತನಾಡುವುದಿಲ್ಲ. ಸದ್ಯಕ್ಕೆ ನಾನು ರಾಜಕೀಯ ಬೆರೆಸಲು ಬಯಸುವುದಿಲ್ಲ. ಮುಖ್ಯಮಂತ್ರಿಯವರ ಸೂಚನೆಯಂತೆ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುವಲ್ಲಿ ಮಗ್ನನಾಗಿದ್ದೇನೆ. ನಮ್ಮ ಜೊತೆ 177 ಮಂದಿ ಬಂದಿದ್ದಾರೆ. ಉಳಿದ 13 ಮಂದಿ ಸಂಜೆಯ ವಿಮಾನದಲ್ಲಿ ಬರುತ್ತಾರೆ. ಬಾಕಿ ಇರುವವರು ನಾಳೆ ಬೆಳಿಗ್ಗೆ ವಿಮಾನದಲ್ಲಿ ಬರುತ್ತಾರೆ. ಎಲ್ಲರಿಗೂ ವಿಮಾನಗಳು ಬುಕ್ ಆಗಿವೆ ಎಂದು ತಿಳಿಸಿದರು.

ಪಾಕಿಸ್ತಾನಕ್ಕೆ ಭಾರತ ದೇಶ ತಕ್ಕ ಪ್ರತಿಕ್ರಿಯೆ ನೀಡಲಿದೆ. ಅದನ್ನು ಇಡೀ ಜಗತ್ತೇ ನೋಡುತ್ತದೆ. ನಮ್ಮ ಸೇನೆಯ ಸಾಮರ್ಥ್ಯ ಯಾವ ರೀತಿ ಉತ್ತರ ನೀಡಬೇಕು ಎಂಬುವಷ್ಟು ಬಲವಾಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

13 mins ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

1 hour ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

2 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

3 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

6 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

6 hours ago