Pak flag on the road Bajrang Dal activists taken into police custody
ಕಲಬುರಗಿ : ನಗರದ ಜಗತ್ ವೃತ್ತದಲ್ಲಿ ಪಾಕಿಸ್ತಾನ ಧ್ವಜವನ್ನು ಅಂಟಿಸಿದ ಬಜರಂಗದಳದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಜರಂಗದಳದ ಕಾರ್ಯಕರ್ತರು ನಗರದ ಜಗತ್ ವೃತ್ತ ಸೇರಿದಂತೆ 20ಕ್ಕೂ ಹೆಚ್ಚಿನ ಪ್ರಮುಖ ಪ್ರದೇಶಗಳಲ್ಲಿ ಪಾಕ್ ಧ್ವಜಗಳನ್ನು ರಸ್ತೆ, ಶೌಚಾಲಯ ಪ್ರದೇಶಗಳಲ್ಲಿ ಅಂಟಿಸಿ ಪಹಲ್ಗಾಮ್‌ನಲ್ಲಿ ಅಮಾಯಕರ ಮೇಲಿನ ಉಗ್ರರ ದಾಳಿಯನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಗುಪ್ತಚರ ಇಲಾಖೆ ಸಿಬ್ಬಂದಿ, ಮತ್ತು ಬ್ರಹ್ಮಪುರ ಠಾಣೆಯ ಪೊಲೀಸರು ಅಂಟಿಸಿದ ಧ್ವಜವನ್ನು ತೆರವುಗೊಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ, ಭಯೋತ್ಪಾದನಾ ಕೃತ್ಯ ಖಂಡಿಸಿ, ವಿವಿಧ ಸಂಘಟನೆಗಳು ವಿವಿಧ ರೀತಿಯಲ್ಲಿ ಪ್ರತಿಭಟನೆಗಳು ನಡೆಸುತ್ತಿವೆ. ನಗರದಲ್ಲೂ ಕೆಲ ಕೆಲವರು ಅನುಮತಿ ಇಲ್ಲದೆ ಪಾಕಿಸ್ತಾನ ಧ್ವಜ ಅಂಟಿಸಿರುವುದು ಕಂಡುಬಂದಿದೆ. ಸದ್ಯಕ್ಕೆ ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ 6 ಮಂದಿ ಬಜರಂಗದಳದ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ. ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ಕ್ರಮ ಜರುಗಿಸಬೇಕಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಚ್ಚರಿಸಿದ್ದಾರೆ.
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…
ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…
ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…