ರಾಜ್ಯ

ರಸ್ತೆಯಲ್ಲಿ ಪಾಕ್‌ ಧ್ವಜ ; ಬಜರಂಗದಳ ಕಾರ್ಯಕರ್ತರು ಪೊಲೀಸ್‌ ವಶಕ್ಕೆ

ಕಲಬುರಗಿ : ನಗರದ ಜಗತ್ ವೃತ್ತದಲ್ಲಿ ಪಾಕಿಸ್ತಾನ ಧ್ವಜವನ್ನು ಅಂಟಿಸಿದ ಬಜರಂಗದಳದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಜರಂಗದಳದ ಕಾರ್ಯಕರ್ತರು ನಗರದ ಜಗತ್ ವೃತ್ತ ಸೇರಿದಂತೆ 20ಕ್ಕೂ ಹೆಚ್ಚಿನ ಪ್ರಮುಖ ಪ್ರದೇಶಗಳಲ್ಲಿ ಪಾಕ್ ಧ್ವಜಗಳನ್ನು ರಸ್ತೆ, ಶೌಚಾಲಯ ಪ್ರದೇಶಗಳಲ್ಲಿ ಅಂಟಿಸಿ ಪಹಲ್ಗಾಮ್‌ನಲ್ಲಿ ಅಮಾಯಕರ ಮೇಲಿನ ಉಗ್ರರ ದಾಳಿಯನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಗುಪ್ತಚರ ಇಲಾಖೆ ಸಿಬ್ಬಂದಿ, ಮತ್ತು ಬ್ರಹ್ಮಪುರ ಠಾಣೆಯ ಪೊಲೀಸರು ಅಂಟಿಸಿದ ಧ್ವಜವನ್ನು ತೆರವುಗೊಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್‌.ಡಿ, ಭಯೋತ್ಪಾದನಾ ಕೃತ್ಯ ಖಂಡಿಸಿ, ವಿವಿಧ ಸಂಘಟನೆಗಳು ವಿವಿಧ ರೀತಿಯಲ್ಲಿ ಪ್ರತಿಭಟನೆಗಳು ನಡೆಸುತ್ತಿವೆ. ನಗರದಲ್ಲೂ ಕೆಲ ಕೆಲವರು ಅನುಮತಿ ಇಲ್ಲದೆ ಪಾಕಿಸ್ತಾನ ಧ್ವಜ ಅಂಟಿಸಿರುವುದು ಕಂಡುಬಂದಿದೆ. ಸದ್ಯಕ್ಕೆ ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ 6 ಮಂದಿ ಬಜರಂಗದಳದ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ. ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ಕ್ರಮ ಜರುಗಿಸಬೇಕಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಚ್ಚರಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

8 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

21 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

22 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

22 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

22 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

22 hours ago