ಬೇಲೂರು (ಹಾಸನ) : ಚೆನ್ನಕೇಶವ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಕುರಾನ್ ಪಠಣ ವಿರೋಧಿಸಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಮಂಗಳವಾರ ಪ್ರತಿಭಟನಾ ಮೆರವಣಿಗೆಯ ವೇಳೆ ಯುವಕನೊಬ್ಬ ಪಾಕಿಸ್ತಾನಕ್ಕೆ ಜೈಕಾರ ಹಾಕಿದ್ದು, ಕೆಲಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.
ಪ್ರತಿಭಟನಕಾರರು ಮೆರವಣಿಗೆ ಮೂಲಕ ಚೆನ್ನಕೇಶವ ದೇವಸ್ಥಾನಕ್ಕೆ ತೆರಳುತ್ತಿದ್ದರು. ಈ ಮಧ್ಯೆ ಯುವಕನೊಬ್ಬ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾನೆ. ಇದರಿಂದ ಆಕ್ರೋಶಗೊಂಡ ಪ್ರತಿಭಟನಕಾರರು, ಸ್ಥಳದಲ್ಲಿಯೇ ಧರಣಿ ಆರಂಭಿಸಿದರು. ಪೊಲೀಸರು ಕೂಡಲೇ ಆ ಯುವಕನನ್ನು ವಶಕ್ಕೆ ಪಡೆದು ಕರೆದೊಯ್ದರು.
ಪಟ್ಟು ಬಿಡದ ಪ್ರತಿಭಟನಕಾರರು ರಸ್ತೆಯಲ್ಲಿಯೇ ಧರಣಿ ಮುಂದುವರಿಸಿದರು. ಸ್ಥಳಕ್ಕೆ ಬಂದ ತಹಶೀಲ್ದಾರ್ ಹಾಗೂ ಪೊಲೀಸ್ ಅಧಿಕಾರಿಗಳು ಪರಿಸ್ಥಿತಿಯನ್ನು ವಿವರಿಸಿ, ಯುವಕನನ್ನು ಬಂಧಿಸಲಾಗಿದೆ. ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.
ನಂತರ ಅಲ್ಲಿಂದ ಎದ್ದ ಪ್ರತಿಭಟನಕಾರರು, ಚೆನ್ನಕೇಶವ ದೇವಸ್ಥಾನದವರೆಗೆ ಮೆರವಣಿಗೆ ನಡೆಸಿ, ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿದರು.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.