ರಾಜ್ಯ

ಪಾಕಿಸ್ತಾನದ ಅವನತಿ ಆರಂಭವಾಗಿದೆ: ಸಂಸದ ಜಗದೀಶ್‌ ಶೆಟ್ಟರ್‌

ಹುಬ್ಬಳ್ಳಿ: ಉಗ್ರಗಾಮಿಗಳು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹಾಗೂ ಸಂಸದ ಜಗದೀಶ್‌ ಶೆಟ್ಟರ್‌ ಪ್ರತಿಕ್ರಿಯೆ ನೀಡಿದ್ದು, ನೆರೆ ದೇಶ ಪಾಕಿಸ್ತಾನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಬಗ್ಗೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರದಲ್ಲಿ ಶಾಂತಿ ನೆಲೆಸಿತ್ತು. ಪ್ರಧಾನಿ ಮೋದಿ, ಅಮಿತ್‌ ಶಾ ಅವರು ಕೈಗೊಂಡ ಕ್ರಮಗಳಿಂದ ಇತ್ತೀಚಿನ ದಿನಗಳಲ್ಲಿ ಶಾಂತಿ ನೆಲೆಸಿತ್ತು. ಈ ಹಿನ್ನೆಲೆಯಲ್ಲಿ ಹೆಚ್ಚಿನ ಜನರು ಅಲ್ಲಿಗೆ ಹೋಗಲು ಆರಂಭಿಸಿದ್ದರು.

ಆದರೆ ನಿನ್ನೆ ಪ್ರವಾಸಿಗರನ್ನೇ ಗುರಿಯಾಗಿಸಿ ಉಗ್ರರು ಈ ದಾಳಿ ನಡೆಸಿದ್ದಾರೆ. ದಾಳಿ ನಡೆಸಿರುವ ಉಗ್ರರ ಹತ್ಯೆಯಾಗಲಿದೆ. ನಮ್ಮ ದೇಶ ಜಗತ್ತಿನಲ್ಲಿ ಪ್ರಬಲವಾಗಿ ಬೆಳೆಯುತ್ತಿದ್ದು, ಅದನ್ನು ಸಹಿಸಿಕೊಳ್ಳಲು ಪಾಕಿಸ್ತಾನಕ್ಕೆ ಆಗುತ್ತಿಲ್ಲ. ಪಾಕಿಸ್ತಾನದ ಅವನತಿ ಆರಂಭವಾಗಿದೆ. ಪ್ರಧಾನಿ ಮೋದಿ ಅವರು ಆದಷ್ಟು ಬೇಗ ಇದಕ್ಕೆ ತಕ್ಕ ಉತ್ತರ ಕೊಡುತ್ತಾರೆ ಎಂದರು.

ಯಾವುದೇ ಕಾರಣಕ್ಕೂ ಉಗ್ರರನ್ನು ಸುಮ್ಮನೆ ಬಿಡಲ್ಲ. ಶೀಘ್ರದಲ್ಲೇ ಅವರ ಹತ್ಯೆ ಗ್ಯಾರಂಟಿ ಎಂದು ಭಯೋತ್ಪಾದಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಆಕಸ್ಮಿಕ ಬೆಂಕಿ : ಒಕ್ಕಣೆ ಕಣದ ರಾಗಿ ಫಸಲು ನಾಸ

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…

2 hours ago

ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರು-ಪೇರು ; ಸದನ ಕಲಾಪಗಳಿಂದ ದೂರ ಉಳಿದ ಸಿಎಂ

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…

2 hours ago

ಶ್ರೀಕಂಠೇಶ್ವರ ದೇವಾಲಯದಲ್ಲಿ ಅಕ್ರಮ?; ತನಿಖೆ ಆರಂಭಿಸಿದ ಎಸಿ ತಂಡ

ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…

2 hours ago

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…

3 hours ago

ಧರ್ಮಸ್ಥಳ ಪ್ರಕರಣ : ಚಿನ್ನಯ್ಯಗೆ ಕೊನೆಗೂ ಬಿಡುಗಡೆ ಭಾಗ್ಯ

ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…

3 hours ago

ಕೈಗಾರಿಕೆ ಸ್ಥಾಪನೆಗೆ 500 ಎಕರೆ ಜಾಗ ಕೊಡುತ್ತೇನೆ : ಎಚ್‌ಡಿಕೆ ಯಾವ ಕೈಗಾರಿಕೆ ತರುತ್ತಾರೋ ತರಲಿ : ಶಾಸಕ ನರೇಂದ್ರಸ್ವಾಮಿ ಸವಾಲು

ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…

3 hours ago