ಹುಬ್ಬಳ್ಳಿ: ಉಗ್ರಗಾಮಿಗಳು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದು, ನೆರೆ ದೇಶ ಪಾಕಿಸ್ತಾನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಬಗ್ಗೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರದಲ್ಲಿ ಶಾಂತಿ ನೆಲೆಸಿತ್ತು. ಪ್ರಧಾನಿ ಮೋದಿ, ಅಮಿತ್ ಶಾ ಅವರು ಕೈಗೊಂಡ ಕ್ರಮಗಳಿಂದ ಇತ್ತೀಚಿನ ದಿನಗಳಲ್ಲಿ ಶಾಂತಿ ನೆಲೆಸಿತ್ತು. ಈ ಹಿನ್ನೆಲೆಯಲ್ಲಿ ಹೆಚ್ಚಿನ ಜನರು ಅಲ್ಲಿಗೆ ಹೋಗಲು ಆರಂಭಿಸಿದ್ದರು.
ಆದರೆ ನಿನ್ನೆ ಪ್ರವಾಸಿಗರನ್ನೇ ಗುರಿಯಾಗಿಸಿ ಉಗ್ರರು ಈ ದಾಳಿ ನಡೆಸಿದ್ದಾರೆ. ದಾಳಿ ನಡೆಸಿರುವ ಉಗ್ರರ ಹತ್ಯೆಯಾಗಲಿದೆ. ನಮ್ಮ ದೇಶ ಜಗತ್ತಿನಲ್ಲಿ ಪ್ರಬಲವಾಗಿ ಬೆಳೆಯುತ್ತಿದ್ದು, ಅದನ್ನು ಸಹಿಸಿಕೊಳ್ಳಲು ಪಾಕಿಸ್ತಾನಕ್ಕೆ ಆಗುತ್ತಿಲ್ಲ. ಪಾಕಿಸ್ತಾನದ ಅವನತಿ ಆರಂಭವಾಗಿದೆ. ಪ್ರಧಾನಿ ಮೋದಿ ಅವರು ಆದಷ್ಟು ಬೇಗ ಇದಕ್ಕೆ ತಕ್ಕ ಉತ್ತರ ಕೊಡುತ್ತಾರೆ ಎಂದರು.
ಯಾವುದೇ ಕಾರಣಕ್ಕೂ ಉಗ್ರರನ್ನು ಸುಮ್ಮನೆ ಬಿಡಲ್ಲ. ಶೀಘ್ರದಲ್ಲೇ ಅವರ ಹತ್ಯೆ ಗ್ಯಾರಂಟಿ ಎಂದು ಭಯೋತ್ಪಾದಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…