ರಾಜ್ಯ

ಅರಮನೆ ಟಿ.ಡಿ.ಆರ್ ಪ್ರಕರಣ: 1996ರ ಕಾನೂನಿನ ಸಿಂಧುತ್ವದ ಬಗ್ಗೆ ತುರ್ತು ವಿಚಾರಣೆಗೆ ಕೋರಿ ರಾಜ್ಯ ಸರ್ಕಾರದ ಅರ್ಜಿ

ಬೆಂಗಳೂರು: ಬೆಂಗಳೂರು ಅರಮನೆಯನ್ನು ವಶಪಡಿಸಿಕೊಂಡಿರುವ ೧೯೯೭ರ ಕಾಯ್ದೆಯ ಸಿಂಧುತ್ವವನ್ನು ಎತ್ತಿ ಹಿಡಿಯಲು ಸರ್ವೋಚ್ಛ ನ್ಯಾಯಾಲಯದ ಮುಂದೆ ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳಬೇಕೆಂದು ಸಲ್ಲಿಸಲಾಗಿರುವ ಮಧ್ಯಂತರ ಅರ್ಜಿಯನ್ನು ಪರಿಗಣಿಸಬೇಕೆಂದು ಕೋರಲು ರಾಜ್ಯ ಸಚಿವ ಸಂಪುಟ ಇಂದು ನಿರ್ಧರಿಸಿದೆ.

ಈ ಹಿಂದೆ  ಉಚ್ಛ ನ್ಯಾಯಾಲಯ ಅನುಮೋದಿಸಿದ ಕರ್ನಾಟಕ ವಿಧಾನ ಮಂಡಲ ಅಂಗೀಕರಿಸಿದ ಅಧಿನಿಯಮವನ್ನು ಎತ್ತಿಹಿಡಿಯಲು ೧೯೯೭ರಲ್ಲಿ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗಳನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಈಗಾಗಲೇ ಮಧ್ಯಂತರ ಅರ್ಜಿಯನ್ನು ಸಲ್ಲಿಸಲಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಹಾಗೂ ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಇಂದು ಮಾಧ್ಯಮ ಪ್ರತಿನಿಧಿಗಳಿಗೆ ಸಚಿವ ಸಂಪುಟ ಸಭೆಯ ನಂತರ ಸಂಪುಟದ ನಿರ್ಣಯದ ಕುರಿತು ವಿವರಿಸಿದರು.

ಸರ್ವೋಚ್ಛ ನ್ಯಾಯಾಲಯವು 2024ರ ಡಿಸೆಂಬರ್‌ 10 ರ  ತೀರ್ಪಿನಂತೆ ಬೆಂಗಳೂರು ಅರಮನೆ ಮೈದಾನಕ್ಕೆ ಸೇರಿದ ೧೫ ಎಕರೆ ೧೭.೫ ಗುಂಟೆ ಜಮೀನನ್ನು ಉಪಯೋಗಿಸಿಕೊಳ್ಳುವುದಕ್ಕೆ ನಿಗಧಿಪಡಿಸಿದ ಟಿ.ಡಿ.ಆರ್ ದರದ ಬಗ್ಗೆ ಸಚಿವ ಸಂಪುಟವು ಇಂದು ಚರ್ಚಿಸಿತು. ನ್ಯಾಯಾಂಗ ನಿಂದನೆ ಅರ್ಜಿಯ ವಿಷಯದಲ್ಲಿ ಕಾನೂನಿನ ಪ್ರಕಾರ ಅಗತ್ಯ ಕ್ರಮ ವಹಿಸಲು ಸಚಿವ ಸಂಪುಟವು ಸಂಬಂಧಪಟ್ಟ ಇಲಾಖೆಗೆ ನಿರ್ದೇಶಿಸಿತು.

ಸರ್ವೋಚ್ಛ ನ್ಯಾಯಾಲಯದ 2024ರ ಡಿಸೆಂಬರ್‌ 21 ರ  ಆದೇಶಾನುಸಾರ ರೂ.೨,೮೩,೫೦೦ ಪ್ರ.ಚ.ಮೀಟರ್‌ಗೆ (ಬಳ್ಳಾರಿ ರಸ್ತೆ) ಮತ್ತು ರೂ.೨,೦೪,೦೦೦ ಪ್ರ.ಚ.ಮೀಟರ್‌ಗೆ ವನ್ನು (ಜಯಮಹಲ್ ರಸ್ತೆ) ಮೌಲ್ಯದಂತೆ ಟಿ.ಡಿ.ಆರ್ ವನ್ನು ನೀಡಲು ಅಂದಾಜು ರೂ.೩೦೧೧.೦೦ ಕೋಟಿಗಳ ಆರ್ಥಿಕ ಹೊರೆ ಬಗ್ಗೆ ಈಗಾಗಲೇ ರಾಜ್ಯ ಸರ್ಕಾರ ಸರ್ವೋಚ್ಛ ನ್ಯಾಯಾಲಯದಲ್ಲಿ ಅಪೀಲು ಸಲ್ಲಿಸಿದ್ದರೂ ಸಹ ಅದನ್ನು ತಿರಸ್ಕರಿಸಲಾಗಿರುತ್ತದೆ.
ಅಲ್ಲದೇ, ಮಾನ್ಯ ಸರ್ವೋಚ್ಛ ನ್ಯಾಯಾಲಯದ ೨೦೦೧ರ ಆದೇಶವನ್ನು ಉಲ್ಲಂಘಿಸಿ ಸುಮಾರು ಬೆಂಗಳೂರು ಅರಮನೆಯ ೨ ಲಕ್ಷ ಚ.ಮೀಟರ್ ವ್ಯಾಪ್ತಿಯಲ್ಲಿ ಖಾಯಂ ಕಟ್ಟಡಗಳನ್ನು ನಿರ್ಮಿಸಿರುವ ಮಹಾರಾಜರ ಉತ್ತರಾಧಿಕಾರಿಗಳ ಮೇಲೆ ನ್ಯಾಯಾಂಗದ ನಿಂದನೆ ಅರ್ಜಿಯನ್ನು ಸಲ್ಲಿಸಲು ಸಹ ಸಚಿವ ಸಂಪುಟ ತೀರ್ಮಾನಿಸಿದೆ. ೧೫ ದಿನಗಳಲ್ಲಿ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸುವ ಬಗ್ಗೆ  ಸರ್ಕಾರದ ವತಿಯಿಂದ ನೋಟಿಸ್‌ಗಳನ್ನು ಜಾರಿ ಮಾಡಲಾಗಿದೆ ಎಂದು ಸಚಿವರು ವಿವರಿಸಿದರು.

ಇಂತಹ ಸ್ಥಳದಲ್ಲಿ ಯಾವುದೇ ಕಾರ್ಯಕ್ರಮಗಳನ್ನು ನಡೆಸಲು ಸರ್ಕಾರದಿಂದ ಇನ್ನೂಮುಂದೆ ಅನುಮತಿ ನೀಡಲು ಸಚಿವ ಸಂಪುಟ ನಿರ್ಬಂಧ ವಿಧಿಸಿದೆ.

ಕರ್ನಾಟಕ ರಾಜ್ಯವು ಬೆಂಗಳೂರು ಅರಮನೆ (ಭೂಸ್ವಾಧಿನ ಮತ್ತು ವರ್ಗಾವಣೆ) ಅಧಿನಿಯಮ, ೧೯೯೬ ಎಂದು ಕರೆಯಲ್ಪಡುವ ಶಾಸನವನ್ನು ಅಧಿನಿಯಮಿಸಿ  ಬೆಂಗಳೂರು ಅರಮನೆಗೆ ಸೇರಿದ ಎಲ್ಲಾ ಸ್ಥಿರ ಚರ ಸ್ವತ್ತುಗಳ (ಕಾಯ್ದೆಯಲ್ಲಿ ನಿರ್ಧಿಷ್ಟಪಡಿಸಲಾದ ಸ್ವತ್ತುಗಳು) ಎಲ್ಲಾ ವಿಧವಾದ ಹಕ್ಕು ರಾಜ್ಯ ಸರ್ಕಾರದಲ್ಲಿ ವಿಹಿತವಾಗುತ್ತದೆ ಎಂದು ತಿಳಿಸಲಾಗಿತ್ತು. ಈ ಅಧಿನಿಯಮವನ್ನು ಪ್ರಶ್ನಿಸಿ ರಿಟ್ ಅರ್ಜಿ ಸಂಖ್ಯೆ: ೩೩೮೩/೧೯೯೭ ರಲ್ಲಿ ಮತ್ತು ಇತರೆ ಸಂಬಂಧಿತ ವಿಷಯಗಳಲ್ಲಿ ಕರ್ನಾಟಕದ ಉಚ್ಛ ನ್ಯಾಯಾಲಯದ ಮುಂದೆ ಪ್ರಶ್ನಿಸಿದ ಸಂದರ್ಭದಲ್ಲಿ ರಾಜ್ಯದ ಶಾಸನದ ಮಾನ್ಯತೆಯನ್ನು ರಾಜ್ಯ ಉಚ್ಛ ನ್ಯಾಯಾಲಯವು ಎತ್ತಿ ಹಿಡಿದಿತ್ತು. ರಾಜ್ಯ ಉಚ್ಛ ನ್ಯಾಯಾಲಯದ ಈ ತೀರ್ಪನ್ನು ಪ್ರಶ್ನಿಸಿ ಅರ್ಜಿದಾರರು ವಿಶೇಷ ಅನುಮತಿ ಅರ್ಜಿ (ಸಿವಿಲ್) ಸಂಖ್ಯೆ: ೮೬೫೦/೧೯೯೭ ರಲ್ಲಿ ಮತ್ತು ಇತರೆ ಸಂಬಂಧಿತ ವಿಷಯಗಳಲ್ಲಿ  ಸರ್ವೋಚ್ಛ ನ್ಯಾಯಾಲಯದ ಮೊರೆ ಹೋಗಿರುತ್ತಾರೆ. ಸರ್ವೋಚ್ಛ ನ್ಯಾಯಾಲಯವು ಈ ಪ್ರಕರಣದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶ ನೀಡಿದೆ. ಈ ಅರ್ಜಿ ವಿಲೆವಾರಿ ಆಗುವವರೆಗೆ ಮಾಲಿಕತ್ವ ಪ್ರಶ್ನೆಯು ಇತ್ಯರ್ಥವಾಗುವವರೆಗೆ ಟಿ.ಡಿ.ಆರ್ ಪ್ರಕರಣವನ್ನು ಕಾನೂನು ಪ್ರಕಾರ ನಿರ್ವಹಿಸಲು ಸಚಿವ ಸಂಪುಟ ನಿರ್ದೇಶಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

57 mins ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

1 hour ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

2 hours ago

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ : ಜನ್ಮದಿನ, ವಿವಾಹ ವಾರ್ಷಿಕೋತ್ಸವಕ್ಕೂ ರಜೆ

ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…

2 hours ago

ಭಾರತ-ಕೆನಡಾ ನಡುವೆ ಎಲೆಕ್ಟ್ರಿಕ್ ವಾಹನ ಒಪ್ಪಂದ : ಎಚ್‌ಡಿಕೆ ನೇತೃತ್ವದಲ್ಲಿ ದ್ವಿಪಕ್ಷೀಯ ಚರ್ಚೆ

ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…

3 hours ago

ಮುಡಾ ಕೇಸ್‌ನಲ್ಲಿ ಸಿಎಂʼಗೆ ನಿರಾಳ : ʻಸತ್ಯ ಮೇವ ಜಯತೆʻ ಫ್ಲೇ ಕಾರ್ಡ್‌ ಹಿಡಿದು ಕಾಂಗ್ರೆಸ್‌ ಸಂಭ್ರಮ

ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…

3 hours ago