Mysore
23
broken clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಪಂಚಾಯಿತಿ ಚುನಾವಣೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಜ್ಯದ ಬಹುತೇಕ ಪಂಚಾಯ್ತಿಗಳ ಆಡಳಿತಾವಧಿ ಮುಗಿದಿದ್ದು, ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಪಂಚಾಯತಿಗಳ ಮೇಲ್ದರ್ಜೆಯಿಂದಾಗಿ ಕ್ಷೇತ್ರ ಪುನರ್ ವಿಂಗಡಣೆ ಮಾಡಬೇಕಾಗಿ ಬಂದಿದ್ದು, ಈ ತಿಂಗಳ ಅಂತ್ಯ ಅಥವಾ ಮುಂದಿನ ತಿಂಗಳಲ್ಲಿ ಈ ಪ್ರಕ್ರಿಯೆ ಮುಗಿಸಿ, ಮೀಸಲಾತಿ ನಿರ್ಧರಿಸಿ ರಾಜ್ಯ ಚುನಾವಣೆ ಆಯೋಗಕ್ಕೆ ಸಲ್ಲಿಸಲಾಗುವುದು. ಆಯೋಗ 45 ದಿನಗಳಲ್ಲಿ ಚುನಾವಣೆ ನಡೆಸುತ್ತದೆ ಎಂದರು.

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಎಸ್.ಐ.ಆರ್. ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಸಿಬ್ಬಂದಿ ಆ ಕಾರ್ಯದಲ್ಲಿ ನಿರತರಾಗಿದ್ದಾರೆ. ಹೀಗಾಗಿ ಕಾಲಾವಕಾಶ ಕೇಳಲಾಗಿದೆ ಎಂದು ತಿಳಿಸಿದರು.

Tags:
error: Content is protected !!