ರಾಜ್ಯ

ಅಮಿತ್ ಶಾ ಹೇಳಿಕೆ ಖಂಡಿಸಿ ವಿಧಾನಸಭೆಯಲ್ಲೂ ಪ್ರತಿಭಟನೆ

ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ ವಿಧಾನಸಭೆಯಲ್ಲೂ ಇಂದು ಗದ್ದಲ-ಕೋಲಾಹಲ ಉಂಟಾಯಿತು.

ಸದನದಲ್ಲಿ ಹಲವಾರು ಕಾಂಗ್ರೆಸ್‌ ಶಾಸಕರು ಅಂಬೇಡ್ಕರ್‌ ಅವರ ಭಾವಚಿತ್ರಗಳನ್ನು ಹಿಡಿದುಕೊಂಡು ಎದ್ದು ನಿಂತು ಘೋಷಣೆಗಳನ್ನು ಕೂಗಲಾರಂಭಿಸಿದರು.

ಜೈಭೀಮ್‌, ನಮಗೆ ನ್ಯಾಯ ಬೇಕು ಮತ್ತು ಅಮಿತ್‌ ಶಾ ಅವರನ್ನು ಸಂಪುಟದಿಂದ ಕೈಬಿಡಿ ಎಂಬ ಘೋಷಣೆಗಳು ಮೊಳಗಿದವು. ಈ ವೇಳೆ ಸ್ಪೀಕರ್‌ ಯು.ಟಿ.ಖಾದರ್‌ ಅವರು ಸದನವನ್ನು ಅಲ್ಪಾವಧಿಗೆ ಮುಂದೂಡಿಕೆ ಮಾಡಿದರು.

ಇನ್ನು ಅಂಬೇಡ್ಕರ್‌ ಕುರಿತು ಅಮಿತ್‌ ಶಾ ಹೇಳಿಕೆಗೆ ವಿಧಾನಪರಿಷತ್ತಿನಲ್ಲೂ ಕೋಲಾಹಲ ಉಂಟಾಯಿತು.

ಆರಂಭದಲ್ಲಿ ಈ ಬಗ್ಗೆ ಚರ್ಚೆಗೆ ಅವಕಾಶ ನೀಡುವುದಾಗಿ ಹೇಳಿದ್ದ ವಿಧಾನಪರಿಷತ್‌ ಸಭಾಪತಿ ಬಸವರಾಜ್‌ ಹೊರಟ್ಟಿ, ಈಗ ಅವಕಾಶ ನೀಡಲಾಗದು ಎಂದರು.

ಈ ವೇಳೆ ಪ್ರಶ್ನೋತ್ತರ ಅವಧಿಗೂ ಮುನ್ನ ಚರ್ಚೆ ನಡೆಸಿದರೆ ಒಳಿತು ಎಂದು ಕಾಂಗ್ರೆಸ್‌ ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಪಟ್ಟು ಹಿಡಿದರು.

ಈ ವೇಳೆ ಮಾತನಾಡಿದ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರು, ಅಂಬೇಡ್ಕರ್‌ ಬದುಕಿದ್ದಾಗ ಯಾರು ಎಷ್ಟು ಅವಮಾನ ಮಾಡಿದ್ದಾರೆ. ಸತ್ತಾಗ ಯಾರು ಎಷ್ಟು ಅವಮಾನ ಮಾಡಿದ್ದಾರೆ ಎಂಬುದನ್ನು ಚರ್ಚಿಸೋಣ ಎಂದು ತಿರುಗೇಟು ನೀಡಿದರು.

ಬಳಿಕ ಮಾತನಾಡಿದ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ಅಮಿತ್‌ ಶಾ ಅವರು ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ. ಬದಲಿಗೆ ಕಾಂಗ್ರೆಸ್‌ ಹೇಗೆ ಅವಮಾನ ಮಾಡಿದೆ ಎಂದು ಹೇಳಿದ್ದಾರೆ ಎಂದರು.

ಈ ವೇಳೆ ಆಡಳಿತ ಹಾಗೂ ವಿಪಕ್ಷಗಳ ನಡುವೆ ಗದ್ದಲ-ಕೋಲಾಹಲವೇ ಏರ್ಪಟ್ಟ ಘಟನೆ ನಡೆಯಿತು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚಾರಣಿಗರ ಸುರಕ್ಷತೆಗಾಗಿ ಟ್ರ್ಯಾಕಿಂಗ್ ಆಪ್, ವಿಮೆ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ರಾಜ್ಯದ ಗಿರಿಶ್ರೇಣಿಗಳಿಗೆ ಬರುವ ಚಾರಣಿಗರ ಸುರಕ್ಷತೆಯ ದೃಷ್ಟಿಯಿಂದ ದೇಶಕ್ಕೆ ಮಾದರಿಯಾಗುವಂತಹ ಪ್ರಮಾಣಿತ ಮಾನದಂಡ (ಎಸ್.ಓ.ಪಿ.) ರೂಪಿಸುವಂತೆ ಅರಣ್ಯ,…

43 mins ago

ಅಡುಗೆ ಅನಿಲ,‌ಪೆಟ್ರೋಲಿಯಂ ಉತ್ಪನ್ನಗಳ ಕೊರತೆಗೆ ಕೇಂದ್ರ ಕಾರಣ ; ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ದೇಶದಲ್ಲಿ ಅಡುಗೆ ಅನಿಲ, ಪೆಟ್ರೊಲ್ ಡಿಸೇಲ್ ಕೊರತೆಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್…

52 mins ago

ಮೈಸೂರು-ಜೋಧ್‌ಪುರ ನಡುವೆ ವಿಶೇಷ ರೈಲು ಸೇವೆ ಆರಂಭ

ಮೈಸೂರು : ಮೈಸೂರು-ಜೋಧ್‌ಪುರ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭವಾಗಿರುವುದಕ್ಕೆ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ…

1 hour ago

ಓದುಗರ ಪತ್ರ | ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಮಾರಕ ನಿರ್ಮಾಣ ಸ್ವಾಗತಾರ್ಹ

೨೦೨೫ರ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ೧೮ ವರ್ಷಗಳ ನಂತರ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಜಯಶೀಲರಾಗಿ…

2 hours ago

ಓದುಗರ ಪತ್ರ | ಆಟೋ ಚಾಲಕರಿಗೆ ಸರ್ಕಾರ ಪರಿಹಾರ ನೀಡಲಿ

ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಯುದ್ಧ ನಡೆಸುತ್ತಿರುವುದರಿಂದ ಕೊಲ್ಲಿ ರಾಷ್ಟ್ರಗಳಿಂದ ಹಾರ್ಮುಜ್ ಜಲಸಂಧಿಯ ಮೂಲಕ ಪೂರೈಕೆಯಾಗುತ್ತಿದ್ದ ಕಚ್ಚಾ ತೈಲ…

2 hours ago

ಓದುಗರ ಪತ್ರ | ಜನಗಣತಿ ದೇಶದ ಏಳಿಗೆಯ ದಿಕ್ಸೂಚಿ

ಜನಗಣತಿ ಕಾರ್ಯದಲ್ಲಿ ಗಣತಿದಾರರು ತಮ್ಮ ವ್ಯಾಪ್ತಿಯ ಪ್ರತಿಯೊಂದು ಮನೆಗೂ ಭೇಟಿ ನೀಡಬೇಕು. ಗುರುತಿನ ಚೀಟಿ ಧರಿಸಿ, ಸೌಜನ್ಯದಿಂದ ಮಾಹಿತಿ ಸಂಗ್ರಹಿಸಿ.…

2 hours ago