DCM DK Shivakumar
ಬೆಂಗಳೂರು: ಗೃಹಸಚಿವ ಡಾ.ಜಿ.ಪರಮೇಶ್ವರ್ ತಮ್ಮ ಮನೆಗೆ ಬಂದು ಚರ್ಚೆ ಮಾಡಿದ್ದು ನಿಜ, ಆದರೆ ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಪ್ರಸ್ತಾಪವಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಸಚಿವರು ತಮ್ಮ ಮನೆಗೆ ಭೇಟಿ ನೀಡಿರುವುದರಲ್ಲಿ ವಿಶೇಷವೇನೂ ಇಲ್ಲ. ಅವರು ಬಂದು ಚರ್ಚೆ ಮಾಡಿದ್ದಾರೆ. ಎಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡುವುದು ನಮ್ಮ ಉದ್ದೇಶ ಎಂದು ಹೇಳಿದರು.
ಕುತೂಹಲ ಕೆರಳಿಸಿದ ಭೇಟಿ: ಮಧ್ಯರಾತ್ರಿ ಜಿ.ಪರಮೇಶ್ವರ್ ಮತ್ತು ಡಿ.ಕೆ.ಶಿವಕುಮಾರ್ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಸಚಿವ ಕೆ.ಎನ್.ರಾಜಣ್ಣ ಇತ್ತೀಚೆಗೆ ರಾಜಕೀಯ ಕ್ರಾಂತಿಯಾಗಲಿದೆ ಎಂಬ ಹೇಳಿಕೆ ನೀಡಿದ್ದರು. ಅದನ್ನು ಪದೇ ಪದೇ ಪುನರುಚ್ಚರಿಸುತ್ತಲೇ ಇದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಗೃಹಸಚಿವರ ನಡುವೆ ಚರ್ಚೆಯಾಗಿದೆ. ಪರಮೇಶ್ವರ್ ಅವರು ತಮ್ಮ ಈ ಭೇಟಿಯ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ. ಡಿ.ಕೆ.ಶಿವಕುಮಾರ್ ಭೇಟಿಯಾಗಿದ್ದನ್ನು ಒಪ್ಪಿಕೊಂಡಿದ್ದಾರೆ. ಆದರೆ ಚರ್ಚೆ ಬಗ್ಗೆ ಬಹಿರಂಗ ಹೇಳಿಕೆ ನೀಡಲು ನಿರಾಕರಿಸಿದ್ದಾರೆ.
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…
೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…
ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…
ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…