ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ವಿಡಿಯೋ ವೈರಲ್ ಬೆನ್ನಲ್ಲೇ ನಟ ದರ್ಶನ್ ಆಪ್ತ ಧನ್ವೀರ್ ಗೌಡ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನು ಓದಿ: ಸಿಸಿಬಿಯಿಂದ ನಟ ದರ್ಶನ್ ಆಪ್ತ ಧನ್ವೀರ್ ವಿಚಾರಣೆ: ಕಾರಣ ಇಷ್ಟೇ
ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ವಿಡಿಯೋ ವೈರಲ್ ಬೆನ್ನಲ್ಲೇ ನಟ ಧನ್ವೀರ್ ಗೌಡ ಅವರನ್ನು ನಿನ್ನೆ ಠಾಣೆಗೆ ಕರೆಸಿಕೊಂಡಿದ್ದ ಸಿಸಿಬಿ ಪೊಲೀಸರು ಮೊಬೈಲ್ ವಶಕ್ಕೆ ಪಡೆದು ಸುಮಾರು ಒಂದು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು.
ಇಂದು ಕೂಡ ವಿಚಾರಣೆ ನಡೆಸುವ ಅಗತ್ಯವಿದ್ದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 3 ಗಂಟೆಯ ಸಮಯದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಧನ್ವೀರ್ ಗೌಡ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.





