ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು ನೋಡಲು ಸಹೋದರ ಸೂರಜ್ ರೇವಣ್ಣ ಇಂದು ಜೈಲಿಗೆ ಭೇಟಿ ನೀಡಿದ್ದರು.
ಲೈಂಗಿಕ ದೌರ್ಜನ್ಯ ಪ್ರಕರಣದಡಿ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು ನೋಡಲು ಕುಟುಂಬ ಆಗಾಗ ಜೈಲಿಗೆ ಭೇಟಿ ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಎಂಎಲ್‌ಸಿ ಸೂರಜ್ ರೇವಣ್ಣ ಅವರು, ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ, ಸಹೋದರ ಪ್ರಜ್ವಲ್ ರೇವಣ್ಣಗೆ ಧೈರ್ಯ ಹೇಳಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನ ವಿಶೇಷ ಸೆಲ್‌ನಲ್ಲಿರುವ ಪ್ರಜ್ವಲ್ ರೇವಣ್ಣನನ್ನು ಭೇಟಿ ಮಾಡಿದ ಸೂರಜ್ ರೇವಣ್ಣ, ಕೆಲಕಾಲ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಮುಂದಿನ ಕಾನೂನು ಹೋರಾಟದ ಬಗ್ಗೆ ಸಹೋದರನ ಜೊತೆ ಚರ್ಚೆ ನಡೆಸಲಾಗಿದ್ದು, ಧೈರ್ಯ ಹೇಳಿದ್ದಾರೆ ಎನ್ನಲಾಗಿದೆ.
ಇನ್ನು ಲೈಂಗಿಕ ದೌರ್ಜನ್ಯ ಪ್ರಕರಣದಡಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕಳೆದ ಒಂದೂವರೆ ತಿಂಗಳಿನಿಂದಲೂ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಕುಟುಂಬ ಸದಸ್ಯರು ಭೇಟಿ ಮಾಡಿ ಧೈರ್ಯ ಹೇಳುತ್ತಿದ್ದಾರೆ.