ಬೆಂಗಳೂರು: ಹದಿನೈದು ಇಪ್ಪತ್ತು ದಿನಗಳಿಂದ ಆಗಿರುವುದು ದುರಾದೃಷ್ಟಕರ. ನಮಗೆ ಈ ಪ್ರಕರಣದಿಂದ ತೀವ್ರ ಬೇಸರವಾಗಿದೆ ಎಂದು ದರ್ಶನ್ ಪ್ರಕರಣ ಕುರಿತು ನಟಿ ರಕ್ಷಿತಾ ಪ್ರೇಮ್ ದಂಪತಿ ಬೇಸರ ವ್ಯಕ್ತಪಡಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ನೋಡಲು ನಟಿ ರಕ್ಷಿತಾ ಹಾಗೂ ಡೈರೆಕ್ಟರ್ ಪ್ರೇಮ್ ಅವರು ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿದ್ದರು.
ಒಂದು ಗಂಟೆ ದರ್ಶನ್ ಜೊತೆ ಭೇಟಿ ಮುಗಿಸಿ ವಾಪಸ್ ಆದ ನಟರು, ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಕಳೆದ ಹದಿನೈದು-ಇಪ್ಪತ್ತು ದಿನದಿಂದ ಆಗಿರುವುದು ದುರಾದೃಷ್ಟಕರ. ನಮಗೆ ಈ ಪ್ರಕರಣದ ಬಗ್ಗೆ ಬೇಜಾರು ಇದೆ. ಪ್ರಕರಣ ನ್ಯಾಯಾಲಯದಲ್ಲಿದೆ. ನಾವು ಈ ಸಂದರ್ಭದಲ್ಲಿ ಪ್ರಕರಣದ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದರು.
ಇನ್ನೂ ಜೈಲಿನಲ್ಲಿ ದರ್ಶನ್ ಜೊತೆ ನಡೆದ ಮಾತುಕತೆ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದ ಅವರು, ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ. ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ ಎಂದು ನಿರ್ದೇಶಕ ಜೋಗಿ ಪ್ರೇಮ್ ಬೇಸರ ವ್ಯಕ್ತಪಡಿಸಿದರು.
ಇತ್ತ ಜೈಲಿನಲ್ಲಿರುವ ದರ್ಶನ್‌ರನ್ನು ನೋಡಲು ಜೈಲುವಾಸಿಗಳೇ ಹರಸಾಹಸ ಪಡುತ್ತಿದ್ದು, ಪದೇ ಪದೇ ಅನಾರೋಗ್ಯ ಸಮಸ್ಯೆ ಹೇಳಿ ಜೈಲು ಆಸ್ಪತ್ರೆ ಕಡೆ ಸುಳಿದಾಡುತ್ತಿದ್ದಾರೆ. ಹೀಗಾಗಿ ನಟ ದರ್ಶನ್ ಜೈಲು ಅಧಿಕಾರಿಗಳಿಗೆ ದೊಡ್ಡ ತಲೆನೋವಾಗಿದ್ದಾರೆ ಎನ್ನಲಾಗುತ್ತಿದೆ.
ನಟ ದರ್ಶನ್ ಜೈಲು ಸೇರಿದ ನಂತರ ಅವರ ಅಭಿಮಾನಿಗಳು, ಚಿತ್ರರಂಗದ ಗಣ್ಯರು ಜೈಲಿಗೆ ಬಂದು ಅವರನ್ನು ಭೇಟಿ ಮಾಡಿ ಹೋಗುತ್ತಿದ್ದಾರೆ. ಚಿತ್ರರಂಗದ ಸಹೋದ್ಯೋಗಿಗಳು, ದರ್ಶನ್ ಅವರಿಂದ ನೆರವು ಪಡೆದವರು ಹಾಗೂ ಅಭಿಮಾನಿಗಳು ದರ್ಶನ್ ನೋಡಲು ಜೈಲಿನತ್ತ ಬರುತ್ತಿದ್ದಾರೆ.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…