ಬೆಂಗಳೂರು: ಮೃತ ಪಿಎಸ್‌ಐ ಪರಶುರಾಮ್ ಅವರ ಪತ್ನಿಗೆ ಸರ್ಕಾರಿ ಕೆಲಸ ನೀಡಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಪಿಎಸ್ಐ ಪರಶುರಾಮ್ ಸಾವಿನ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪರಶುರಾಮ್ ಸಾವು ನಿಗೂಢವಾಗಿದ್ದು, ಉನ್ನತ ಮಟ್ಟದ ಸಿಐಡಿ ತನಿಖೆ ನಡೆಯುತ್ತಿದೆ. ಪರಶುರಾಮ್ ಅವರ ಪತ್ನಿಗೆ ಸರ್ಕಾರಿ ನೌಕರಿ ಹಾಗೂ ಸರ್ಕಾರದಿಂದ ಪರಿಹಾರ ನೀಡುವ ಬಗ್ಗೆ ಚಿಂತಿಸಲಾಗಿದೆ ಎಂದು ತಿಳಿಸಿದರು.
ಪರಶುರಾಮ್ ಅವರದ್ದು ಆತ್ಮಹತ್ಯೆ ಅಲ್ಲ ಎಂದು ಇಲಾಖೆ ಹೇಳಿದೆ. ಮರಣೋತ್ತರ ವರದಿ ಬಳಿಕ ಸತ್ಯ ಏನೆಂಬುದು ತಿಳಿಯಲಿದೆ. ನಮ್ಮ ಇಲಾಖೆಯಲ್ಲಿ ಕಲಸ ಮಾಡಿದ ಪರಶುರಾಮ್ ಅವರ ಪತ್ನಿಗೆ ಇಲಾಖಾ ವತಿಯಿಂದ ಸೂಕ್ತ ಪರಿಹಾರ ಒದಗಿಸಲಾಗುವುದು ಎಂದು ಪರಮೇಶ್ವರ್ ತಿಳಿಸಿದರು.





