Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

ಪರಿಷತ್‌ ಚುನಾವಣೆ: ಮೂವರ ಹೆಸರನ್ನು ಅಂತಿಮಗೊಳಿಸಿದ ಬಿಜೆಪಿ

ಬೆಂಗಳೂರು: ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ಮೂರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಎನ್.ರವಿಕುಮಾರ್‌, ಸಿ.ಟಿ. ರವಿ ಮತ್ತು ಎಂ.ಜಿ ಮುಳೆ ಅವರ ಹೆಸರಗಳನ್ನು ಬಿಜೆಪಿ ಹೈಕಮಾಂಡ್‌ ಅಂತಿಮಗೊಳಿಸಿದೆ.

ಧನ್ಯವಾದ ತಿಳಿಸಿದ ಸಿ.ಟಿ ರವಿ
ಕರ್ನಾಟಕ ವಿಧಾನಪರಿಷತ್ತಿನ ದೈವಾರ್ಷಿಕ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಕ್ಕೆ ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರಿಗೆ, ಕೇಂದ್ರ ಸಂಸದೀಯ ಮಂಡಳಿ ಸದಸ್ಯರಾದ ಬಿ.ಎಸ್‌ ಯಡಿಯೂರಪ್ಪ ಅವರಿಗೆ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳಾದ ಬಿ.ಎಲ್‌ ಸಂತೋಷ್‌, ಕೇಂದ್ರ ಗೃಹ ಸಚಿವರಾದ ಅಮಿತ್‌ ಶಾ ಅವರಿಗೆ, ಬಿಜೆಪಿ ಕರ್ನಾಟಕ ಅಧ್ಯಕ್ಷರಾದ ಬಿ.ವೈ ವಿಜಯೇಂದ್ರ ಹಾಗೂ ರಾಜ್ಯ ಕೋರ್ ಕಮಿಟಿಯ ಎಲ್ಲಾ ನನ್ನ ಸಹೋದ್ಯೋಗಿ ಬಂಧುಗಳಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದು ಸಿ.ಟಿ ರವಿ ಟ್ವಿಟ್‌ ಮಾಡಿದ್ದಾರೆ.

ಹಾಗೆಯೇ ವಿಧಾನಪರಿಷತ್ತಿಗೆ ಅಭ್ಯರ್ಥಿಗಳಾಗಿ ಆಯ್ಕೆಯಾದ ಎನ್.ರವಿಕುಮಾರ್ ಹಾಗು ಎಂ ಜಿ ಮೂಳೆಯವರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.

Tags: