ಬೆಂಗಳೂರು: ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ಮೂರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.
ಎನ್.ರವಿಕುಮಾರ್, ಸಿ.ಟಿ. ರವಿ ಮತ್ತು ಎಂ.ಜಿ ಮುಳೆ ಅವರ ಹೆಸರಗಳನ್ನು ಬಿಜೆಪಿ ಹೈಕಮಾಂಡ್ ಅಂತಿಮಗೊಳಿಸಿದೆ.
ಧನ್ಯವಾದ ತಿಳಿಸಿದ ಸಿ.ಟಿ ರವಿ
ಕರ್ನಾಟಕ ವಿಧಾನಪರಿಷತ್ತಿನ ದೈವಾರ್ಷಿಕ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಕ್ಕೆ ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರಿಗೆ, ಕೇಂದ್ರ ಸಂಸದೀಯ ಮಂಡಳಿ ಸದಸ್ಯರಾದ ಬಿ.ಎಸ್ ಯಡಿಯೂರಪ್ಪ ಅವರಿಗೆ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳಾದ ಬಿ.ಎಲ್ ಸಂತೋಷ್, ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೆ, ಬಿಜೆಪಿ ಕರ್ನಾಟಕ ಅಧ್ಯಕ್ಷರಾದ ಬಿ.ವೈ ವಿಜಯೇಂದ್ರ ಹಾಗೂ ರಾಜ್ಯ ಕೋರ್ ಕಮಿಟಿಯ ಎಲ್ಲಾ ನನ್ನ ಸಹೋದ್ಯೋಗಿ ಬಂಧುಗಳಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದು ಸಿ.ಟಿ ರವಿ ಟ್ವಿಟ್ ಮಾಡಿದ್ದಾರೆ.
ಹಾಗೆಯೇ ವಿಧಾನಪರಿಷತ್ತಿಗೆ ಅಭ್ಯರ್ಥಿಗಳಾಗಿ ಆಯ್ಕೆಯಾದ ಎನ್.ರವಿಕುಮಾರ್ ಹಾಗು ಎಂ ಜಿ ಮೂಳೆಯವರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.
ಮೈಸೂರು: ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದ ವ್ಯಕ್ತಿಯಿಂದ 80 ಸಾವಿರ ರೂ ದೋಚಿದ್ದ ಇಬ್ಬರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ರಮೇಶ್ ಹಾಗೂ…
ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಯಲ್ಲಿ ನಡೆದಿದೆ.…
ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಸ್ಟಾರ್ ವಾರ್ ಬಗ್ಗೆ ನಟ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಯುದ್ಧಕ್ಕೆ ಸಿದ್ಧ ಮಾತಿಗೆ…
ಮೈಸೂರಿನ ಸುಭಾಷ್ ನಗರದ ೪ನೇ ಮುಖ್ಯರಸ್ತೆಯಲ್ಲಿರುವ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲುತ್ತಿದ್ದು, ಗಾಳಿ ಅಥವಾ ಮಳೆಯ ಸಮಯದಲ್ಲಿ ಶಾರ್ಟ್…
ರಾಜ್ಯದಲ್ಲಿ ೩೧೫ ಕುಸ್ತಿಪಟುಗಳಿಗೆ ಉಚಿತವಾಗಿ ನುರಿತ ಕುಸ್ತಿ ತರಬೇತುದಾರರಿಂದ ವೈಜ್ಞಾನಿಕ ಕ್ರೀಡಾ ತರಬೇತಿ ನೀಡಲಾಗುತ್ತಿದೆ ಹಾಗೂ ರಾಜ್ಯದಲ್ಲಿ ಕ್ರೀಡಾ ಅಭಿವೃದ್ಧಿಗಾಗಿ…
ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಸಭ್ಯ ಉಡುಪುಗಳನ್ನು ಧರಿಸಿಕೊಂಡು ಬರುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿರುವುದು ಸ್ವಾಗತಾರ್ಹವಾಗಿದೆ. ಕೆಲವು…