ಮೈಸೂರು: ಕರ್ನಾಟಕ ವಿಧಾನ ಪರಿಷತ್ತಿಗೆ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 3 ರಂದು ಮತದಾನ ನಡೆಯಲಿದ್ದು, ಮತದಾನಕ್ಕೆ ಅನುಕೂಲವಾಗುವಂತೆ ಶಿಕ್ಷಕರು ಹಾಗೂ ಪಧವೀದರರಿಗೆ ಮತದಾನದಿನದಂದು ಸಾಂದರ್ಭಿಕ ರಜೆ ನೀಡಲಾಗಿದೆ.
ದಕ್ಷಿಣ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯ ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಜಿಲ್ಲೆಗಳ ಸರ್ಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕ್‌ಗಳು, ಇತರ ಸಂಘ ಸಂಸ್ಥೆಗಳಲ್ಲಿ ಕಾಯಂ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಪದವೀಧರರು ಹಾಗೂ ಶಿಕ್ಷಕರು ಮತದಾನ ವಾಡಲು ಅನುಕೂಲವಾಗುವಂತೆ ಸಾಂದರ್ಭಿಕ ರಜೆ ನೀಡಲಾಗಿದೆ ಎಂದು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.