ರಾಜ್ಯ

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು ಅಭ್ಯರ್ಥಿಗಳು ಜಯಗಳಿಸಿದ್ದಾರೆ.

ಜೆಡಿಎಸ್​​ನಿಂದ ಸ್ಪರ್ಧಿಸಿದ್ದ ಏಕೈಕ ಅಭ್ಯರ್ಥಿ ಸೋಲುಂಡಿದ್ದು, ಬಿಜೆಪಿ ಮತ್ತು ಜೆಡಿಎಸ್​​ನಿಂದ ಕ್ರಾಸ್​​ ವೋಟಿಂಗ್​​ ಆಗಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಕಾಂಗ್ರೆಸ್​ನ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್​ಗೆ 32 ಮತಗಳು ಬಂದಿದ್ದರೆ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಪರ 14 ಮತಗಳು ಬಿದ್ದಿವೆ.

ಯಾವ್ಯಾವ ಅಭ್ಯರ್ಥಿಗೆ ಎಷ್ಟು ಮತ?
ಜೆಡಿಎಸ್ ಅಭ್ಯರ್ಥಿ ಗೋವಿಂದರಾಜುಗೆ 14 ಮತಗಳು
ಕಾಂಗ್ರೆಸ್​​ನ ಬಿ.ಕೆ. ಹರಿಪ್ರಸಾದ್​​ಗೆ 30 ಮತಗಳು
ಕಾಂಗ್ರೆಸ್​ನ ತಿಪ್ಪಣ್ಣಪ್ಪ ಕಮಕನೂರುಗೆ 30 ಮತಗಳು
ಕಾಂಗ್ರೆಸ್​ನ ಪಿ.ವಿ.ಮೋಹನ್​ಗೆ 29 ಮತಗಳು
ಕಾಂಗ್ರೆಸ್​ನ ಬಿ.ಎಸ್.ಶಿವಣ್ಣಗೆ 30 ಮತಗಳು
ಕಾಂಗ್ರೆಸ್​ನ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್​ಗೆ 32 ಮತ
ಬಿಜೆಪಿ ಅಭ್ಯರ್ಥಿ ಆರ್.ರಘುಗೆ 29 ಮತಗಳು
ಬಿಜೆಪಿ ಅಭ್ಯರ್ಥಿ ಲಿಂಗರಾಜು ಪಾಟೀಲ್​ಗೆ 27 ಮತಗಳು

ಎಲಿಮಿನೇಷನ್ ರೌಂಡ್​ನಲ್ಲಿ ಲಿಂಗರಾಜ್ ಪಾಟೀಲ್​ಗೆ ಜಯ
ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್​ಗೆ 11 ಹೆಚ್ಚುವರಿ ಮತಗಳು ದೊರೆತಿವೆ. ಶಿವರಾಂ ಹೆಬ್ಬಾರ್, ಎಸ್​.ಟಿ.ಸೋಮಶೇಖರ್ ಹೊರತುಪಡಿಸಿ ಬಿಜೆಪಿಯ 3 ಮತ್ತು ಜೆಡಿಎಸ್​ನ 6 ಶಾಸಕರಿಂದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾವಣೆಗೊಂಡಿದೆ. ಹೀಗಾಗಿ ಲಿಂಗರಾಜ ಪಾಟೀಲ್ ಗೆಲುವಿನ ಕೋಟಾ ತಲುಪಿರಲಿಲ್ಲ. ಪ್ರತಿ ಅಭ್ಯರ್ಥಿ ಗೆಲ್ಲಲು 27.63 ಮತ ಪಡೆಯಬೇಕು. ಆದರೆ ಲಿಂಗರಾಜ ಪಾಟೀಲ್​ಗೆ ಕೇವಲ 27 ಮತಗಳು ಸಿಕ್ಕಿದ್ದವು. ಜೆಡಿಎಸ್​ನ ಗೋವಿಂದರಾಜು 14 ಮತ ಪಡೆದಿದ್ದ ಹಿನ್ನೆಲೆ ಎಲಿಮಿನೇಷನ್ ರೌಂಡ್​ನಲ್ಲಿ ಲಿಂಗರಾಜ್ ಪಾಟೀಲ್​ಗೆ ಜಯ ಸಿಕ್ಕಿದೆ.

ಒಂದು ಮತ ಅಸಿಂಧು
ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಚಲಾವಣೆಗೊಂಡಿದ್ದ 222 ಮತಗಳ ಪೈಕಿ ಒಂದು ಮತ ಅಸಿಂಧುವಾಗಿದೆ. ನಂಬರ್ ಸರಿಯಾಗಿ ಬರೆಯದಿದ್ದಕ್ಕೆ 1 ಮತವನ್ನು ತಿರಸ್ಕರಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

2 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

3 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

4 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

9 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

16 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

16 hours ago