ಬೆಂಗಳೂರು : ಪಕ್ಷದ ಸಿದ್ದಾಂತ ಒಪ್ಪಿ ಯಾರೆ ಬಂದರೂ ಅವರನ್ನು ಸ್ವಾಗತಿಸುತ್ತೇವೆ ಎಂದು ಡಿಕೆ ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅಭ್ಯರ್ಥಿಗಳು ಪಕ್ಷ ಬದಲಾವಣೆ ಮಾಡುತ್ತಿರುವ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಆಕಾಂಕ್ಷಿಗಳು ಪಕ್ಷದಿಂದ ಪಕ್ಷಕ್ಕೆ ಹೋಗುವುದು ಮಾಮೂಲಿ. ರಾಜಕೀಯದಲ್ಲಿ ಪಕ್ಷ ಬದಲಾವಣೆ ಸರ್ವೇ ಸಾಮಾನ್ಯ ಎಂದು ಹೇಳಿದರು.
ಸದಾನಂದ ಗೌಡ ಅವರ ವಿಚಾರವಾಗಿ ಮಾತನಾಡಿದ ಅವರು, ಸಿದ್ದಾಂತ ಒಪ್ಪಿ ಯಾರು ಬಂದರು ಸ್ವಾಗತ. ಸದಾನಂದ ಗೌಡರ ಕಾಂಗ್ರೆಸ್ ಸೇರ್ಪಡೆ ವಿಚಾರವನ್ನು ಬಹಿರಂಗ ಪಡಿಸುವುದಿಲ್ಲ.
ನಮ್ಮ ರಾಜಕಾರಣದ ತಂತ್ರಗಾರಿಕೆಯನ್ನು ಹೇಳುವುದಿಲ್ಲ ಎಂದು ತಿಳಿಸಿದರು.





