ಬೆಂಗಳೂರು: ಸಿಎಂ ರೇಸ್‌ನಲ್ಲಿ ಯಾರೇ ಇದ್ದರೂ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಬೆಳಗಾವಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದು, ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಹಾಡಿ ಹೊಗಳಿದ್ದಾರೆ. ಈ ಮೂಲಕ ಪರೋಕ್ಷವಾಗಿ ಮುಂದಿನ ಉತ್ತರಾಧಿಕಾರಿ ಹೆಸರು ಮುನ್ನೆಲೆಗೆ ತಂದಿದ್ದಾರೆ ಎಂದು ಹೇಳಲಾಗುತ್ತಿದೆ.
ಇನ್ನು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಸಿಎಂ ರೇಸ್‌ನಲ್ಲಿ ಯಾರೇ ಇದ್ದರೂ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ. ಶಾಸಕರ ಅಭಿಪ್ರಾಯ ಸಂಗ್ರಹಿಸಿ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಹೇಳಿದರು.





