Mysore
28
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ಪಕ್ಷದ ಹೈಕಮಾಂಡ್‌ ನಮಗೆ ದೇವಸ್ಥಾನ ಇದ್ದ ಹಾಗೆ: ಸಚಿವ ಸತೀಶ್‌ ಜಾರಕಿಹೊಳಿ

ಮಂಗಳೂರು: ಡಿ.ಕೆ.ಶಿವಕುಮಾರ್‌ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಬದಲಿಸುವ ವಿಚಾರದಲ್ಲಿ ನಾವು ಹಠಕ್ಕೆ ಬಿದ್ದಿಲ್ಲ. ಪಕ್ಷದ ಹೈಕಮಾಂಡ್‌ ನಮಗೆ ದೇವಸ್ಥಾನ ಇದ್ದ ಹಾಗೆ, ಹೈಕಮಾಂಡ್‌ ಬಳಿ ಪ್ರಾರ್ಥನೆ ಮಾಡಿದ್ದೇವೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷ ಬೆಳೆಯಬೇಕು. ಮತ್ತೆ ಅಧಿಕಾರಕ್ಕೆ ಬರಬೇಕು ಎಂಬ ಕಾರಣಕ್ಕೆ ಹೈಕಮಾಂಡ್‌ ಮುಂದೆ ಕೆಲವೊಂದಿಷ್ಟು ವಿಚಾರಗಳನ್ನು ವ್ಯಕ್ತಪಡಿಸಿದ್ದೇವೆ. ಸಣ್ಣ ಪುಟ್ಟ ವ್ಯತ್ಯಾಸಗಳಿದ್ದರೆ ಸರಿಪಡಿಸುವ ಕಾರ್ಯವನ್ನು ಹೈಕಮಾಂಡ್‌ ಮಾಡುತ್ತದೆ ಎಂದರು.

ಇನ್ನು ದಲಿತ ಸಮಾವೇಶದ ಕುರಿತು ಮಾತನಾಡಿದ ಅವರು, ದಲಿತ ಸಮಾವೇಶ ಸದ್ಯಕ್ಕೆ ಇಲ್ಲ. ಅದು ನಡೆಯುವುದು ಗೃಹ ಸಚಿವ ಪರಮೇಶ್ವರ್‌ ಅವರ ನೇತೃತ್ವದಲ್ಲಿ. ಅವರು ಹೇಳಿದಾಗ ಸಮಾವೇಶ ನಡೆಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಲಿ ಎಂದು ಡಿಕೆಶಿ ಹೇಳಿರುವುದರಿಂದ ಈ ಬಗ್ಗೆ ಪ್ರತಿಕ್ರಿಯಿಸುವ ಪ್ರಶ್ನೆಯೇ ಬರಲ್ಲ. ಸಚಿವರ ಬದಲಾವಣೆ ಕುರಿತು ನಮ್ಮ ಹಂತದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದರು.

 

Tags:
error: Content is protected !!