ಮಂಗಳೂರು: ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಬದಲಿಸುವ ವಿಚಾರದಲ್ಲಿ ನಾವು ಹಠಕ್ಕೆ ಬಿದ್ದಿಲ್ಲ. ಪಕ್ಷದ ಹೈಕಮಾಂಡ್ ನಮಗೆ ದೇವಸ್ಥಾನ ಇದ್ದ ಹಾಗೆ, ಹೈಕಮಾಂಡ್ ಬಳಿ ಪ್ರಾರ್ಥನೆ ಮಾಡಿದ್ದೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷ ಬೆಳೆಯಬೇಕು. ಮತ್ತೆ ಅಧಿಕಾರಕ್ಕೆ ಬರಬೇಕು ಎಂಬ ಕಾರಣಕ್ಕೆ ಹೈಕಮಾಂಡ್ ಮುಂದೆ ಕೆಲವೊಂದಿಷ್ಟು ವಿಚಾರಗಳನ್ನು ವ್ಯಕ್ತಪಡಿಸಿದ್ದೇವೆ. ಸಣ್ಣ ಪುಟ್ಟ ವ್ಯತ್ಯಾಸಗಳಿದ್ದರೆ ಸರಿಪಡಿಸುವ ಕಾರ್ಯವನ್ನು ಹೈಕಮಾಂಡ್ ಮಾಡುತ್ತದೆ ಎಂದರು.
ಇನ್ನು ದಲಿತ ಸಮಾವೇಶದ ಕುರಿತು ಮಾತನಾಡಿದ ಅವರು, ದಲಿತ ಸಮಾವೇಶ ಸದ್ಯಕ್ಕೆ ಇಲ್ಲ. ಅದು ನಡೆಯುವುದು ಗೃಹ ಸಚಿವ ಪರಮೇಶ್ವರ್ ಅವರ ನೇತೃತ್ವದಲ್ಲಿ. ಅವರು ಹೇಳಿದಾಗ ಸಮಾವೇಶ ನಡೆಸುತ್ತೇವೆ ಎಂದು ಸ್ಪಷ್ಟಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಲಿ ಎಂದು ಡಿಕೆಶಿ ಹೇಳಿರುವುದರಿಂದ ಈ ಬಗ್ಗೆ ಪ್ರತಿಕ್ರಿಯಿಸುವ ಪ್ರಶ್ನೆಯೇ ಬರಲ್ಲ. ಸಚಿವರ ಬದಲಾವಣೆ ಕುರಿತು ನಮ್ಮ ಹಂತದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದರು.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…