pavithra gowda
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ.1 ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಕೊಲೆ ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿ ಬೆಂಗಳೂರಿನ 57ನೇ ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ.
ಪ್ರಕರಣದಲ್ಲಿ ಜಾಮೀನು ಕೋರಿ ಪವಿತ್ರಾ ಗೌಡ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ಅವರ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಏಳು ಮಂದಿ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
ನಂತರ ರಾಜ್ಯ ಸರ್ಕಾರ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಸಿತ್ತು. ನಂತರ ಸುಪ್ರೀಂಕೋರ್ಟ್ ಜಾಮೀನು ರದ್ದು ಮಾಡಿ ಆರೋಪಿಗಳನ್ನು ಮತ್ತೆ ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿತ್ತು.
ಅಂತೆಯೇ ಪೊಲೀಸರು ನಟ ದರ್ಶನ್ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ಮತ್ತೆ ಬಂಧಿಸಿ ಜೈಲಿಗಟ್ಟಿದ್ದರು. ಆದರೆ ಕೊಲೆ ಪ್ರಕರಣದ ಎ.1 ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ 57ನೇ ಸೆಷನ್ಸ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಪವಿತ್ರಾಗೌಡಗೆ ಬಿಗ್ ಶಾಕ್ ಎದುರಾಗಿದ್ದು, ಜೈಲಿನಲ್ಲೇ ಕಂಬಿ ಎಣಿಸುವ ಪರಿಸ್ಥಿತಿ ಎದುರಾಗಿದೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…