ಬೆಂಗಳೂರು: ನಟ ದರ್ಶನ್ ಹಾಗೂ ನಟಿ ಪವಿತ್ರಗೌಡ ಅವರು ಆಪ್ತರು ಎಂಬುದು ಗುಟ್ಟಾಗಿ ಉಳಿದಿಲ್ಲ. ಆದರೆ ಅವರಿಬ್ಬರು ಗಂಡ-ಹೆಂಡತಿ ಅಲ್ಲ ಎಂದು ನಗರ ಪೊಲೀಸ್ ಆಯುಕ್ತರಿಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪತ್ರ ಬರೆದು ಸ್ಪಷ್ಟನೆ ನೀಡಿದ್ದಾರೆ.
2003 ರ ಮೇ ತಿಂಗಳಲ್ಲಿ ನಾನು ಮತ್ತು ದರ್ಶನ್ ಧರ್ಮಸ್ಥಳದಲ್ಲಿ ಕಾನೂನಾತ್ಮಕವಾಗಿ ಮದುವೆ ಹಾಗಿದ್ದೇವೆ. ನಮ್ಮಿಬ್ಬರಿಗೆ ಒಬ್ಬ ಮಗ ಇದ್ದಾನೆ. ಹಾಗೆಯೇ ಪವಿತ್ರಗೌಡ ಹಾಗೂ ಸಂಜಯ್‌ಸಿಂಗ್ ಎಂಬುವವರು ಮದುವೆ ಆಗಿದ್ದಾರೆ. ಅವರಿಬ್ಬರಿಗೂ ಒಬ್ಬಳು ಹೆಣ್ಣು ಮಗಳಿದ್ದಾಳೆ ಎಂದು ಪತ್ರದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಉಲ್ಲೇಖಿಸಿದ್ದಾರೆ.
ನೀವು ಮಾಧ್ಯಗೋಷ್ಠಿಯಲ್ಲಿ ದರ್ಶನ್ ಹೆಂಡತಿ ಪವಿತ್ರಗೌಡ ಅಂತ ತಪ್ಪಾಗಿ ಹೇಳಿದ್ದೀರಿ. ಆ ಬಳಿಕ ರಾಜ್ಯದ ಗೃಹಮಂತ್ರಿಗಳು, ರಾಷ್ಟ್ರಮಟ್ಟದ ಮಾಧ್ಯಮದವರು ಕೂಡ ಅದನ್ನೇ ಹೇಳಿದರು. ರೇಣುಕಾಸ್ವಾಮಿ ಕೊಲೆ ಕೇಸ್‌ದಲ್ಲಿ ದರ್ಶನ್ ದಂಪತಿ ಅರೆಸ್ಟ್ ಅಂತ ಸುದ್ದಿ ಮಾಡಿದರು. ಇದರಿಂದಾಗಿ ನಾನು ಮತ್ತು ನನ್ನ ಮಗ ವಿನೀಶ್ ಮುಂದಿನ ದಿನಗಳಲಿ ತೊಂದರೆ ಅನುಭವಿಸುವಂತೆ ಆಗಬಾರದು. ಪೊಲೀಸ್ ದಾಖಲೆಗಳಲ್ಲಿ ಈ ಮಾಹಿತಿ ಸ್ಪಷ್ಟವಾಗಿರಲಿ. ಪೊಲೀಸ್ ದಾಖಲೆಯಲ್ಲಿ ಪವಿತ್ರಗೌಡ ದರ್ಶನ್ ಅವರ ಪತ್ನಿ ಎಂದು ಬರೆಯಬೇಡಿ ಎಂದು ಮನವಿ ಮಾಡಿದ್ದಾರೆ.