ರಾಜ್ಯ

ಪವಿತ್ರಗೌಡ ದರ್ಶನ ಪತ್ನಿ ಅಲ್ಲ: ಪೊಲೀಸ್‌ ಆಯುಕ್ತರಿಗೆ ವಿಜಯಲಕ್ಷ್ಮಿ ಪತ್ರ

ಬೆಂಗಳೂರು: ನಟ ದರ್ಶನ್‌ ಹಾಗೂ ನಟಿ ಪವಿತ್ರಗೌಡ ಅವರು ಆಪ್ತರು ಎಂಬುದು ಗುಟ್ಟಾಗಿ ಉಳಿದಿಲ್ಲ. ಆದರೆ ಅವರಿಬ್ಬರು ಗಂಡ-ಹೆಂಡತಿ ಅಲ್ಲ ಎಂದು ನಗರ ಪೊಲೀಸ್‌ ಆಯುಕ್ತರಿಗೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಪತ್ರ ಬರೆದು ಸ್ಪಷ್ಟನೆ ನೀಡಿದ್ದಾರೆ.

2003 ರ ಮೇ ತಿಂಗಳಲ್ಲಿ ನಾನು ಮತ್ತು ದರ್ಶನ್‌ ಧರ್ಮಸ್ಥಳದಲ್ಲಿ ಕಾನೂನಾತ್ಮಕವಾಗಿ ಮದುವೆ ಹಾಗಿದ್ದೇವೆ. ನಮ್ಮಿಬ್ಬರಿಗೆ ಒಬ್ಬ ಮಗ ಇದ್ದಾನೆ. ಹಾಗೆಯೇ ಪವಿತ್ರಗೌಡ ಹಾಗೂ ಸಂಜಯ್‌ಸಿಂಗ್‌ ಎಂಬುವವರು ಮದುವೆ ಆಗಿದ್ದಾರೆ. ಅವರಿಬ್ಬರಿಗೂ ಒಬ್ಬಳು ಹೆಣ್ಣು ಮಗಳಿದ್ದಾಳೆ ಎಂದು ಪತ್ರದಲ್ಲಿ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಉಲ್ಲೇಖಿಸಿದ್ದಾರೆ.

ನೀವು ಮಾಧ್ಯಗೋಷ್ಠಿಯಲ್ಲಿ ದರ್ಶನ್‌ ಹೆಂಡತಿ ಪವಿತ್ರಗೌಡ ಅಂತ ತಪ್ಪಾಗಿ ಹೇಳಿದ್ದೀರಿ. ಆ ಬಳಿಕ ರಾಜ್ಯದ ಗೃಹಮಂತ್ರಿಗಳು, ರಾಷ್ಟ್ರಮಟ್ಟದ ಮಾಧ್ಯಮದವರು ಕೂಡ ಅದನ್ನೇ ಹೇಳಿದರು. ರೇಣುಕಾಸ್ವಾಮಿ ಕೊಲೆ ಕೇಸ್‌ದಲ್ಲಿ ದರ್ಶನ್‌ ದಂಪತಿ ಅರೆಸ್ಟ್ ಅಂತ ಸುದ್ದಿ ಮಾಡಿದರು. ಇದರಿಂದಾಗಿ ನಾನು ಮತ್ತು ನನ್ನ ಮಗ ವಿನೀಶ್‌ ಮುಂದಿನ ದಿನಗಳಲಿ ತೊಂದರೆ ಅನುಭವಿಸುವಂತೆ ಆಗಬಾರದು. ಪೊಲೀಸ್ ದಾಖಲೆಗಳಲ್ಲಿ ಈ ಮಾಹಿತಿ ಸ್ಪಷ್ಟವಾಗಿರಲಿ. ಪೊಲೀಸ್‌ ದಾಖಲೆಯಲ್ಲಿ ಪವಿತ್ರಗೌಡ ದರ್ಶನ್‌ ಅವರ ಪತ್ನಿ ಎಂದು ಬರೆಯಬೇಡಿ ಎಂದು ಮನವಿ ಮಾಡಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

12 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

12 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

13 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

13 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

13 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

13 hours ago